ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಗ್ರಾಮೀಣ ಭಾಗದ ಜನತೆಯ ಸ್ವಾವಲಂಬಿ ಬದುಕಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಜನಪರವಾದ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಹೇಳಿದರು.
ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಹಮ್ಮಿಕೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ್ ಮಾತನಾಡಿ, ಧಗ್ರಾ ಯೋಜನೆಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು, ಸಂಘದ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post