ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ. ಕೃಷ್ಣಪ್ಪ ಚಂದ್ರಗುತ್ತಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ಈ ಹಿಂದೆ ಊರ ಗ್ರಾಮಸ್ಥರು ಗ್ರಾಮೀಣ ಪ್ರದೇಶದಲ್ಲಿ ಬಹುಸಂಖ್ಯಾತ ವಿದ್ಯಾರ್ಥಿಗಳಿದ್ದು ಚಂದ್ರಗುತ್ತಿಯಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪನೆ ಆದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಜೊತೆಗೆ ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯಲ್ಲಿ ಅಂಕರವಳ್ಳಿ, ಕಮರೂರು, ಹರೀಶಿ, ಗುಡವಿ, ಕಡಸೂರು, ಚಂದ್ರಗುತ್ತಿ, ಹಾಗೂ ತಾಲೂಕಿನ ಗಡಿ ಭಾಗದಲ್ಲಿ ಕಾನಗೋಡು ಪ್ರೌಢಶಾಲೆಗಳು ಇದ್ದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತದೆ ಎಂದು ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪನವರ ಗಮನಕ್ಕೆ ತಂದಿದ್ದರು.
ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪನವರ ಸಹಕಾರದಿಂದ ಧಾರ್ಮಿಕ ಕ್ಷೇತ್ರವಾದ ಚಂದ್ರಗುತ್ತಿಯಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪಿಸಲು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
Also read: ಅಪಘಾತ ತಡೆಗೆ ಸಾರ್ವಜನಿಕರೇ ಅಳವಡಿಸಿದರು ಅಪಾಯ ಸೂಚನೆಯ ನಾಮಫಲಕ
ಸ್ಥಳ ಪರಿಶೀಲನೆಯಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ, ಗ್ರಾಂ.ಪ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಎಂ.ಪಿ. ರತ್ನಾಕರ, ತಾಪಂ ಮಾಜಿ ಸದಸ್ಯರಾದ ಎನ್.ಜಿ. ನಾಗರಾಜ, ಪ್ರಾಂಶುಪಾಲರಾದ ಎಂ. ಸುರೇಶಪ್ಪ, ಪಂಡ್ರೀನಾಥ್, ಶಶಿಕುಮಾರ್, ಗ್ರಾಮಸ್ಥರಾದ ವಿನಾಯಕ ಶೇಟ್, ಕೆ. ಪರಮೇಶ್, ಮಂಜುನಾಥ ಸೇರಿದಂತೆ ಇತರರಿದ್ದರು.
ಚಂದ್ರಗುತ್ತಿ ಹೋಬಳಿಯಲ್ಲಿ 42 ಹಳ್ಳಿಗಳು ಸೇರಿದ್ದು ಇಲ್ಲಿ ಪದವಿ ಪೂರ್ವ ಶಿಕ್ಷಣ ಒದಗಿಸುವ ಉದ್ದೇಶದಿಂದ ಪದವಿ ಪೂರ್ವ ಕಾಲೇಜು ಸ್ಥಾಪಿಸಲು ಚಂದ್ರಗುತ್ತಿಯಲ್ಲಿ ಸ್ಥಳ ಪರಿಶೀಲನೆ ನಡೆಸಿರುವುದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಸಂತಸ ತಂದಿದೆ.
(ವರದಿ: ಮಧುರಾಮ್, ಸೊರಬ)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















