ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಇಲ್ಲಿನ ಮೆಸ್ಕಾಂ ಕಚೇರಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ಕಾರ್ಯಕ್ರಮವು ಸೋಮವಾರ ವಿಜೃಂಭಣೆಯಿಂದ ನಡೆಯಿತು.
ವಿಸರ್ಜನಾ ಮೆರವಣಿಗೆಯಲ್ಲಿ ವಿದ್ಯುತ್ ಶಾಖಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹಾಡಿನ ಸದ್ದಿಗೆ ಹೆಜ್ಜೆ ಹಾಕುತ್ತಾ, ಜೈ ಗಣೇಶ್ ಮಹಾರಾಜ್ ಕೀ, ಗಣಪತಿ ಬಪ್ಪ ಮೋರಯ ಎಂಬ ಘೋ?ಣೆಗಳನ್ನು ಕೂಗುತ್ತಾ ಸಂಭ್ರಮಿಸಿದರು.
ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಚಂದ್ರಗುತ್ತಿ ಪೊಲೀಸ್ ಠಾಣೆಯ ಆರಕ್ಷಕರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
Also read: ಸೆ.20ರಂದು ಆರ್‌ಎಸ್‌ಎಸ್ ಕಚೇರಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿಯ ರಾಜಬೀದಿ ಉತ್ಸವ
ಮೆಸ್ಕಾಂ ಕಛೇರಿಯಿಂದ ಗಣಪತಿ ಮೆರವಣಿಗೆಯು ಪ್ರಮುಖ ರಸ್ತೆ ಮಾರ್ಗವಾಗಿ ಹರೀಶಿ ರಸ್ತೆಯಲ್ಲಿರುವ ಗಣಪತಿ ಕೆರೆಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post