ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಗುರುಪೂರ್ಣಿಮೆ ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಸೋಮವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯ ಸರ್ಕಾರ ರಾಜ್ಯದಾದ್ಯಂತ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಂದ್ರಗುತ್ತಿಯಲ್ಲಿ ನಾರಿ ಶಕ್ತಿ ಪ್ರದರ್ಶನವಾಯಿತು. ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನಕ್ಕೆ ಬಯಲು ಸೀಮೆ ಮತ್ತು ಉತ್ತರ ಕರ್ನಾಟಕ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿರುವುದು ವಿಶೇಷವಾಗಿದೆ. ಅಲ್ಲದೆ ಹುಣ್ಣಿಮೆಯ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.
Also read: 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ ನೀರು ಮರೀಚಿಕೆ! ಬತ್ತಿದ ತುಂಗಭದ್ರಾ ನದಿ, ರೈತರಿಗೆ ಆತಂಕ
ವರದಿ: ಮಧುರಾಮ್, ಸೊರಬ
Discussion about this post