ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಹೋಬಳಿಯ ಸುತ್ತಮುತ್ತ ಗಾಳಿ ಸಹಿತ ಜೋರು ಮಳೆಯಾಗಿದ್ದು, ಬಿರುಸಿನ ಗಾಳಿಗೆ ಹಲವು ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಡಕಾಯಿತು.
ಅಂಕರವಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರ ಉರುಳಿದ್ದು, ಮನೆಯ ಹಂಚು ತಗುಡುಗಳಿಗೆ ಹಾನಿಯಾಗಿದೆ ಜೊತೆಗೆ ಕಾರ್ ಶೆಡ್ ನಲ್ಲಿದ್ದ ಕಾರಿಗೂ ಹಾನಿಯಾಗಿದೆ. ಮತ್ತೊಂದಡೆ ಅಂಗಡಿ ಮಳಿಗೆ ಮೇಲೆ ಮರ ಉರುಳಿದ್ದು, ಅಂಗಡಿಯಲ್ಲಿದ್ದ ಸಾವಿರಾರು ರೂ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.
ಅಂಕರವಳ್ಳಿ ಚಂದ್ರಗುತ್ತಿ ಮಾರ್ಗದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಕಾಂಗ್ರೆಸ್ ಮುಖಂಡ ವಿನಾಯಕ ಹೆಗಡೆ ಹಾಗೂ ದತ್ತ ಹೆಗಡೆ ಅವರು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ಜೆಸಿಬಿ ಮೂಲಕ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಕಲ್ಕುಣಿ ಕ್ರಾಸ್ ಬಳಿ ಮರವೊಂದು ಉರುಳಿ ಬಿದ್ದಿದೆ.
ಬಿರುಸಿನ ಗಾಳಿಗೆ ಜೋಳದಗುಡ್ಡೆ ಸಮೀಪದ ಗೋಮಂತೇಶ್ವರ ದೇವಸ್ಥಾನದ ಮೇಲ್ಛಾವಣಿಗೆ ಹಾನಿಯಾಗಿದೆ. ಹೋಬಳಿಯ ಸುತ್ತಮತ್ತ ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಯಿತು.
ಹೋಬಳಿಯ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ಬಿಸಿಲು ನಿಂದ ಕಾದ ಇಳೆಗೆ ತಂಪಾಗಿದೆ. ರೈತರ ಮುಖದಲ್ಲಿ ಮೊದಲ ಮಳೆ ಮಂದಹಾಸ ಮೂಡಿಸಿದೆ. ಮಳೆ ಮತ್ತೊಂದಡೆ ಹಾನಿಯನ್ನು ಸಹ ಮಾಡಿದೆ.
Also read: ಸಚಿವರಾದ ಈಶ್ವರ ಖಂಡ್ರೆ, ರಹಿಂಖಾನ್ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ: ಬಂಡೆಪ್ಪ ಖಾಶೆಂಪುರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post