ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ #Chandragutti Shri Renukamba Temple ಹೊಸ್ತಿಲು ಹುಣ್ಣಿಮೆ ನಿಮಿತ್ತ ಭಾನುವಾರ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಸೇರಿದಂತೆ ಹರಿಹರ, ಹಾವೇರಿ, ಹಾನಗಲ್, ಶಿವಮೊಗ್ಗ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಹಿರೇಕೆರೂರು, ಬ್ಯಾಡಗಿ, ರಾಣೆಬೆನ್ನೂರು, ಚಿಕ್ಕಮಂಗಳೂರು, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತರ ಆರಾಧ್ಯ ದೇವತೆ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

Also read: ಬೆಂಗಳೂರು | ಕಣ್ಮನ ತಣಿಸಿದ ನೃತ್ಯ ಪ್ರದರ್ಶನ, ಭರತನಾಟ್ಯ ರಂಗ ಪ್ರವೇಶ
ದೇವಿಯ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ಹಾಗೂ ವಿವಿಧ ಸೇವೆ, ಹರಿಕೆ, ಮುಂತಾದವುಗಳನ್ನು ಆಚರಿಸಿದರು.

ಹೊಸ್ತಿಲ ಹುಣ್ಣಿಮೆ ನಿಮಿತ್ತ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ ದೇವಸ್ಥಾನದಿಂದ ವಾದ್ಯ ಮೇಳಗಳೊಂದಿಗೆ ಆರಂಭವಾಗಿ ಗ್ರಾಮದ ಮಂಗಳಾರತಿ ಕಟ್ಟೆ, ಸೇರಿದಂತೆ ಮುಖ್ಯ ರಸ್ತೆ ಮಾರ್ಗವಾಗಿ ದೇಗುಲದವರೆಗೆ ಸಂಭ್ರಮದಿಂದ ಜರುಗಿತು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post