ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ #Chandragutti Shri Renukamba Temple ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಬುಧವಾರ ನಡೆಯಿತು.
ತಹಶೀಲ್ದಾರ್ ಹುಸೇನ್ ಸರಕವಸ್ ಹಾಗೂ ಉಪ ತಹಶೀಲ್ದಾರ್ ಲಲಿತಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮಿಳಕುಮಾರಿ ಅವರ ಸಮ್ಮುಖದಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಯಿತು.
ಕಳೆದ 06-03-2024ಮಾರ್ಚ್ ತಿಂಗಳಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ ರೂ.2253700 ಸಂಗ್ರಹವಾಗಿತ್ತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 43 ಲಕ್ಷ 61ಸಾವಿರದ 80 ರೂ. ಕಾಣಿಕೆ ಸಂಗ್ರಹವಾಗಿದೆ, ಏಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಆಳವಡಿಸಲಾಗಿತ್ತು.
Also read: ಯಡಿಯೂರಪ್ಪಗೆ ಬಿಗ್ ರಿಲೀಫ್ | ಮಾಜಿ ಸಿಎಂ ಬಗ್ಗೆ ಹೈಕೋರ್ಟ್ ಹೇಳಿದ್ದೇನು?
ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ ಶಿರಸ್ತೇದಾರ್ ಎಸ್. ನಿರ್ಮಲ ಪ್ರಭಾಕರ್, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ.ಶೃತಿ, ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ಸಂಜಯ್, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























