ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಸರ್ಕಾರವು ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡಿ ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದು ಹರೀಶಿ ಗ್ರಾ.ಪಂ ಅಧ್ಯಕ್ಷ ವಜ್ರ ಕುಮಾರ್ ಹೇಳಿದರು,
ಚಂದ್ರಗುತ್ತಿ ಸಮೀಪದ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಹರೀಶಿ ಗ್ರಾಮ ಪಂಚಾಯತಿಯಿಂದ ಸೋಮವಾರದಂದು ಏರ್ಪಡಿಸಿದ ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು,
ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದ್ದು ಯುವಕರಲ್ಲಿ ಕ್ರೀಡಾಸಕ್ತಿಯೂ ಇಂತಹ ಕಾರ್ಯಕ್ರಮದಿಂದ ವೃದ್ಧಿಯಾಗುತ್ತದೆ. ಎಲೆಮರೆಕಾಯಿಯಂತಿದ್ದ ಸಾಕಷ್ಟು ಅರ್ಹ ಪ್ರತಿಭೆಗಳಿಗೆ ಇದರಿಂದ ಅವಕಾಶ ದೊರಕಲಿದೆ ಎಂದರು.
Also read: ರಾಜ್ಯ ಸರ್ಕಾರಿ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಬದ್ಧ: ಸಚಿವ ಶ್ರೀರಾಮುಲು
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಮಾತನಾಡಿ ಗ್ರಾಮೀಣ ಕ್ರೀಡಾಕೂಟ ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆಯಿರಿಸಿದೆ, ಆ ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನಲೇ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಭಾಗದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲು ಮುಂದಾಗಿದೆ ಎಂದರು.
ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿಯಿಂದ ಸನ್ಮಾನಿಸಲಾಯಿತು,
ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಕೆ.ಪಿ ಕೃಷ್ಣಪ್ಪ, ಮಹೇಶ್, ಕೃಷ್ಣಮೂರ್ತಿ, ಉಮಾ, ಜಯಲಕ್ಷ್ಮಿ, ಗ್ರಾ.ಪಂ ಅಭಿವೃದ್ಧಿಅಧಿಕಾರಿ ಸಂತೋಷ್ ಕುಮಾರ್, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್, ಗ್ರಂಥಾಲಯ ಮೇಲ್ವಿಚಾರಕ ಕೆ ರಾಜು, ಸೇರಿದಂತೆ ಗ್ರಾ.ಪಂ ಸಿಬ್ಬಂದಿ ಸ್ವ ಸಹಾಯ ಸಂಘದ ಸದಸ್ಯರು ಶಾಲೆಯ ಎಲ್ಲಾ ಶಿಕ್ಷಕ ವರ್ಗದವರು ಊರಿನ ಪ್ರಮುಖರು ಇದ್ದರು,
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post