No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪ್ರಾಥಮಿಕ ಹಂತದಲ್ಲೇ ಸೇವಾ ಮನೋಭಾವ ಜಾಗೃತಗೊಂಡರೆ ಸಮಾಜ ಸುಧಾರಣೆ ಸಾಧ್ಯ

ವೃಕ್ಷಾರೋಪಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಶ್ರೀಪಾದ ಬಿಚ್ಚುಗತ್ತಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2023
in ಸೊರಬ
0
ಪ್ರಾಥಮಿಕ ಹಂತದಲ್ಲೇ ಸೇವಾ ಮನೋಭಾವ ಜಾಗೃತಗೊಂಡರೆ ಸಮಾಜ ಸುಧಾರಣೆ ಸಾಧ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಪ್ರತಿಫಲಾಪೇಕ್ಷೆ ಇಲ್ಲದೆ ಸಮಾಜಕ್ಕೆ ನೀಡುವ ನಮ್ಮ ಯಾವುದೇ ಸೇವೆಗಳು ನಮಗರಿವಿಲ್ಲದಂತೆ ಸಾರ್ಥಕವಾಗಿರುತ್ತದೆ. ಸೇವಾ ಮನೋಭಾವ ಪ್ರಾಥಮಿಕ ಹಂತದಲ್ಲಿ ಜಾಗೃತಗೊಂಡರೆ ಮುಂದೊಮ್ಮೆ ಸಮಾಜದ ಸುಧಾರಣೆಗೆ ನೆರವಾಗುತ್ತದೆ ಎಂದು ಪರ್ಯಾವರಣ ಗತಿ ವಿಧಿ ಕಾರ್ಯಕರ್ತ ಶ್ರೀಪಾದ ಬಿಚ್ಚುಗತ್ತಿ ಹೇಳಿದರು.

ಚಂದ್ರಗುತ್ತಿ ಪ್ರೌಢಶಾಲಾ ಆವರಣದಲ್ಲಿ ಸ್ಪೂರ್ತಿ ಸ್ನೇಹಿತರ ಬಳಗ ಹಾಗೂ ಶಾಲಾಡಳಿತ, ಅರಣ್ಯ ಇಲಾಖೆ ಸಂಯುಕ್ತವಾಗಿ ಏರ್ಪಡಿಸಿದ್ದ ವೃಕ್ಷಾರೋಪಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಪರಿಸರ ಎಂದ ಕೂಡಲೇ ಕೇವಲ ಗಿಡಮರಗಳ ಜಾಗೃತಿಯಷ್ಟೆ ಅಲ್ಲ, ನಮ್ಮ ಸಂಸ್ಕೃತಿಯ ಜಾಗೃತಿಯೂ ಬೇಕಾಗುತ್ತದೆ. ಸಂಸ್ಕೃತಿ ಮತ್ತು ಸಂಸ್ಕಾರಗಳು ವಿದ್ಯಾರ್ಥಿ ದಿಸೆಯಿಂದಲೆ ದೊರೆಯಬೇಕು. ಇಂತಹ ಸಂಸ್ಕಾರ ದೊರೆತಿದ್ದಕ್ಕೆ ಸಾಕ್ಷಿಯಾಗಿ ಇದೇ ಶಾಲೆಯಲ್ಲಿ ಓದಿರುವ ಹಳೆಯ ವಿದ್ಯಾರ್ಥಿಗಳು ಸ್ಪೂರ್ತಿ ಬಳಗ ರಚಿಸಿಕೊಂಡು ಜ್ಞಾನ ದೇಗುಲಕ್ಕೆ ಅರ್ಥಪೂರ್ಣ ನಮನ ಸಲ್ಲಿಸಿದ್ದಾರೆ. ಈ ನೆಲೆಯ ಋಣವನ್ನು ವಿವಿಧ ಸಾಮಾಜಿಕ ಕಾರ್ಯದ ಮೂಲಕ ತೀರಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ, ಈ ಸಂಘಟನೆ ದೇಶಕ್ಕೆ ಮಾದರಿಯಾಗಬೇಕು ಎಂದು ಆಶಿಸಿದರು.

ನಿವೃತ್ತ ಶಿಕ್ಷಕಿ ವಿನೋದ ಅರ್ಚಕ್ ಮಾತನಾಡಿ, ಶೈಕ್ಷಣಿಕ ಹಂತದ ಜ್ಞಾನ ಸ್ಥಳೀಯ ಪರಿಸರಕ್ಕೆ ಪೂರಕವಾಗಿದ್ದರೆ ಅಲ್ಲಿನ ಪರಿಸರ ಹೆಚ್ಚು ಘಾಸಿಗೊಳಗಾಗುವುದಿಲ್ಲ. ಅಂತರ್ಜಲ ವೃದ್ಧಿಗೆ, ಶುದ್ಧ ಗಾಳಿಗೆ ಮಾರಕವಾಗಿರುವ ಪ್ಲಾಸ್ಟಿಕ್ ನ್ನು ಎಲ್ಲೆಂದರಲ್ಲಿ ಬಿಸಾಕ ಬಾರದು, ಯಾವುದೇ ಕಾರಣಕ್ಕೂ ಬೆಂಕಿ ಹಚ್ಚದೆ ಒಂದೆಡೆ ಗುಂಡಿಯಲ್ಲಿ ಹೂಳಿ ಅಥವಾ ರಿಸೈಕಲ್ ಗೆ ಬಳಸಿ ಎಂದರು. ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ನೆಟ್ಟಿರುವ ಗಿಡಗಳನ್ನು ಕಾಪಾಡಿಕೊಳ್ಳುವ ಸಂಕಲ್ಪ ಮಾಡಿದರು.
ದೀಪಕ್ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ವೃಕ್ಷಾರೋಪಣ ನೆರವೇರಿಸಲಾಯಿತು. ನಂತರ ದೀಪಕ್ ದೇಸಾಯಿ ಮಾತನಾಡಿ ಪ್ಲಾಸ್ಟಿಕ್ ನಿಂದ ಪರಿಸರ ಮಲಿನವಾಗದಂತೆ ಕಾಯ್ದುಕೊಳ್ಳಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಗಿಡಗಳನ್ನು ನೆಡುವುದರ ಜೊತೆಗೆ ಗಿಡಗಳನ್ನು ಬೆಳೆಸಿ ಉಳಿಸಿಕೊಂಡು ಹೋಗಬೇಕು ಪರಿಸರದ ಮೇಲೆ ಪ್ರತಿಯೊಬ್ಬರಿಗೂ ಕಾಳಜಿ ವಹಿಸಬೇಕು.ಎಂದು ಕರೆ ನೀಡಿದರು.
ಶ್ರೀ ರೇಣುಕಾಂಬ ದೇವಸ್ಥಾನ ಆವರಣದಲ್ಲಿ ಹಲವಾರು ಜಾತಿಯ ಗಿಡಗಳನ್ನು ನೀಡಲಾಯಿತು. ಪುರಾಣ ಪ್ರಸಿದ್ಧ ಕ್ಷೇತ್ರಕ್ಕೆ ಇಲ್ಲಿಗೆ ಬರುವ ಭಕ್ತಾದಿಗಳು ಗಿಡನೆಡುವ ಮೂಲಕ, ಪ್ಲಾಸ್ಟಿಕ್ ಬಿಸಾಡದೆ ಪರಿಸರ ಕಾಯ್ದುಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಪರಿಸರಾಸಕ್ತರು ಕೋರಿಕೊಂಡರು.

ಸ್ಪೂರ್ತಿ ಸ್ನೇಹಿತರ ಬಳಗದ ಪ್ರತಿಯೊಬ್ಬ ಸದಸ್ಯರ ಸಹಕಾರ ಮತ್ತು ಪರಿಶ್ರಮದಿಂದ ಇಂತಹ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವ ಚಿಂತನೆ ನಮ್ಮದಾಗಿದೆ.
ವೀಣಾ ಶಶಿಧರ್ ಹೆಗಡೆ ಸ್ಪೂರ್ತಿ ಸ್ನೇಹಿತರ ಬಳಗದ ಅಧ್ಯಕ್ಷೆ

ಕಾರ್ಯಕ್ರಮದ ಉಪಾಧ್ಯಕ್ಷ ಗೋಪಿ ಟಿ ಜಾದವ್, ಸ್ಪೂರ್ತಿ ಸ್ನೇಹಿತರ ಬಳಗದ ಅಧ್ಯಕ್ಷೆ ವೀಣಾ ಶಶಿಧರ್ ಹೆಗಡೆ, ಉಪಾಧ್ಯಕ್ಷ ಶಿವಕುಮಾರ್ ಅಂಕರವಳ್ಳಿ, ಕಾರ್ಯದರ್ಶಿ ಪ್ರಶಾಂತ್ ಜೆ ಎಸ್ ನಾಯ್ಕ್, ಬಳಗದವರಾದ ದೀಪಕ್ ದೇಸಾಯಿ, ಶರದ್ ನಾಯಕ್, ವಿಶ್ವನಾಥ್, ದೇವರಾಜ್ ಬೋವಿ, ದಿನೇಶ್ ಮಣ್ಣತ್ತಿ, ಶ್ರೀಧರ್, ಪ್ರಕಾಶ್, ಅನ್ಸರ್ ಅಂಕರವಳ್ಳಿ, ದೇವರಾಜ್ ಚಿಕ್ಕಮಾಕಪ್ಪ, ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Nitish Kumar’s dream of becoming PM with support from 20 parties involved in Rs 20 lakh crore scam will fall flat: Shah

Next Post

ಗುರುವಿನಲ್ಲಿ ಶ್ರೀಹರಿಯನ್ನು ಕಾಣು: ಗುರುಪೂರ್ಣಿಮೆಯ ಮಹತ್ವವೇನು ಇಲ್ಲಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Gurupoornima

ಗುರುವಿನಲ್ಲಿ ಶ್ರೀಹರಿಯನ್ನು ಕಾಣು: ಗುರುಪೂರ್ಣಿಮೆಯ ಮಹತ್ವವೇನು ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL