ಶ್ರೀಹರಿಕೋಟಾ: ಇಡಿಯ ವಿಶ್ವವೇ ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ಐತಿಹಾಸಿಕ ಕ್ಷಣ ಸನಿಹವಾಗಿದ್ದು, ಚಂದ್ರಯಾನ 2 ನಭಕ್ಕೆ ಕೆಲವೇ ಕ್ಷಣಗಳಲ್ಲಿ ಹಾರಲಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಕೆಲವೇ ಕ್ಷಣಗಳಲ್ಲಿ ರಾಕೇಟ್ ನಭಕ್ಕೆ ಚಿಮ್ಮಲಿದ್ದು, ವಿಜ್ಞಾನ ಲೋಕದ ಕೌತುಕ ಮನೆಮಾಡಿದೆ.
ನೇರ ಪ್ರಸಾರ ನೋಡಿ:
ಕಳೆದ 15ರಂದು ತಾಂತ್ರಿಕ ಅಡಚಣೆಯಿಂದ ಉಡಾವಣೆಗೆ 1 ಗಂಟೆ ಮೊದಲು ರದ್ದಾಗಿತ್ತು.
ಚಂದ್ರಯಾನ-2 ನ ಕಾರ್ಯಕ್ಷಮತೆ ಸಹಜವಾಗಿದ್ದು ಎಲ್ಲವೂ ಅಂದುಕೊಂಡಂತೆ ಇಂದು ಉಡಾವಣೆಯಾಗಲಿದೆ ಎಂದು ಇಸ್ರೊ ಅಧ್ಯಕ್ಷ ಕೆ ಶಿವನ್ ತಿಳಿಸಿದ್ದಾರೆ. ಭಾರತದ ಎರಡನೆಯ ಚಂದ್ರ ಪರಿಶೋಧನೆ ಯೋಜನೆಯಾಗಿರುವ ಚಂದ್ರಯಾನ-2 ಯಶಸ್ವಿಯಾಗಲಿದ್ದು ಇದರಿಂದ ಚಂದ್ರನ ಮೇಲ್ಮೈ ಮೇಲಿನ ಹಲವು ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ.
2008ರಲ್ಲಿ ಉಡಾವಣೆಯಾಗಿದ್ದ ಚಂದ್ರಯಾನ-1 ಚಂದ್ರನ ಮೇಲೆ ನೀರಿನ ಅಂಶ ಇರುವುದನ್ನು ಪತ್ತೆ ಹಚ್ಚಿತ್ತು. ಈ ಯೋಜನೆ ಯಶಸ್ವಿಯಾದರೆ, ಚಂದ್ರನ ಮೇಲೆ ಉಪಗ್ರಹವನ್ನು ಇಳಿಸಿದ ದೇಶಗಳಾದ ಅಮೆರಿಕಾ, ರಷ್ಯಾ, ಚೀನಾ ದೇಶಗಳ ಸಾಲಿಗೆ ಭಾರತ ನಿಲ್ಲಲಿದ್ದು ಪ್ರಪಂಚದಲ್ಲಿ ನಾಲ್ಕನೆಯ ದೇಶ ಎನಿಸಿಕೊಳ್ಳಲಿದೆ.

Discussion about this post