Read - 2 minutes
ಕಲ್ಪ ಮೀಡಿಯಾ ಹೌಸ್ | ಮೈಸೂರು |
ಹಾಸನ #Hassan ರೈಲ್ವೆ ಯಾರ್ಡ್’ನಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ ನವೆಂಬರ್ 5ರಂದು ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ಪ್ರಕಟಿಸಿದ್ದು, ನವೆಂಬರ್ 5ರ ಒಂದು ದಿನ ಮೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸಬೇಕಾಗಿ ಕೋರಿದೆ.
- 16206 ಸಂಖ್ಯೆಯ ಮೈಸೂರು – ತಾಳಗುಪ್ಪ #Talguppa ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯದಲ್ಲಿ 120 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
- 56266 ಸಂಖ್ಯೆಯ ಮೈಸೂರು – ಅರಸೀಕೆರೆ #Arsikere ಪ್ಯಾಸೆಂಜರ್ ರೈಲು ಮಾರ್ಗಮಧ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
- 16208 ಸಂಖ್ಯೆಯ ಮೈಸೂರು – ಯಶವಂತಪುರ #Yeshwantpur ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯದಲ್ಲಿ 45 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post