ಕಲ್ಪ ಮೀಡಿಯಾ ಹೌಸ್
ಚನ್ನಗಿರಿ: ತಾಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಲ್ಲಿ ಅಥಿತಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ನವೀನ್ ಗಂಗಾಧರ ರೂಗಿ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇವರು ಮುರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗ ಶೈಕ್ಷಣಿಕ ಸಾಧನೆಯ ಮೇಲೆ ಪ್ರಭಾವಬೀರುವ ಶೈಕ್ಷಣಿಕ ಅಂಶಗಳು;ಸಮಾಜಶಾಸ್ತ್ರೀಯ ಅಧ್ಯಯನಎಂಬ ವಿಷಯದ ಮೇಲೆ ಕುವೆಂಪು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಈ ಚಂದ್ರಶೇಖರ್, ಇವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯ ಕೈಗೊಂಡಿದ್ದರು.
ಚನ್ನಗಿರಿಯ ಶ್ರೀಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯದಿಂದ ದ್ವಿತೀಯ ರ್‍ಯಾಂಕ್ ಪಡೆದಿದ್ದರು.
ನವೀನ್ ಅವರು ಚನ್ನಗಿರಿ ಪಟ್ಟಣದ ನಿವೃತ್ತ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗಂಗಾಧರ ರೂಗಿ, ಮತ್ತು ಉಮಾ ರೂಗಿ ಅವರ ದ್ವಿತೀಯ ಪುತ್ರರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post