ಕಲ್ಪ ಮೀಡಿಯಾ ಹೌಸ್ | ಚನ್ನಗಿರಿ/ಶಿವಮೊಗ್ಗ |
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದು ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ.
ಗುರಾಯಿಸಿ ನೋಡಿದರು ಎನ್ನುವ ಕಾರಣಕ್ಕೆ ಹನುಮಂತ, ಗೋಪಿ ಎಂಬುವರಿಗೆ ಅನ್ಯಕೋಮಿನ ಯುವಕರ ಗುಂಪು ಚಾಕು ಇರಿದಿದೆ ಎನ್ನಲಾಗಿದ್ದು, ಗಾಯಗೊಂಡ ಯುವಕನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎರಡು ಗುಂಪುಗಳ ನಡುವೆ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಗೋಪಿ ಶಿವಮೊಗ್ಗದ ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post