ಕಲ್ಪ ಮೀಡಿಯಾ ಹೌಸ್ | ಚನ್ನಪಟ್ಟಣ |
ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಸಿ.ಪಿ ಯೋಗೇಶ್ವರ್ ರವರು ಚನ್ನಪಟ್ಟಣ ಜನರಿಗೆ ಮೋಸ ಮಾಡಿದ್ದಾರೆ. ಎಲ್ಲಾ ಪಕ್ಷಗಳಿಗೆ ಅವರು ಜಂಪ್ ಮಾಡಿಕೊಂಡು ಸಾಗುತ್ತಿದ್ದಾರೆ. ಅವರಿಗೆ ಚನ್ನಪಟ್ಟಣ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಬೇಕು ಎಂದು ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು.
ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ #By Election ಎನ್ಡಿಎ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿರವರ ಪರವಾಗಿ ಕ್ಷೇತ್ರದ ಮಾರೇಗೌಡನದೊಡ್ಡಿ (ಎಮ್.ಜಿ ದೊಡ್ಡಿ), ನೆಲಮಾಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚಿಸಿದರು.
ಚನ್ನಪಟ್ಟಣ ಕ್ಷೇತ್ರದ ಮಾರೇಗೌಡನದೊಡ್ಡಿ (ಎಮ್.ಜಿ ದೊಡ್ಡಿ), ನೆಲಮಾಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡು, ಸನ್ಮಾನಿಸಿ ಗೌರವಿಸಿದರು.
ಸಿ.ಪಿ ಯೋಗೇಶ್ವರ್ ರವರಿಗೆ ನಾವು ಜೆಡಿಎಸ್, ಬಿಜೆಪಿ ಎರಡು ಪಕ್ಷಗಳಿಂದ ಟಿಕೆಟ್ ಕೊಡಲು ಸಿದ್ದರಿದ್ದೇವು. ಆದರೇ ಅವರು ಕಾಂಗ್ರೆಸ್ ಗೆ ಹೋಗುವ ನಿರ್ಧಾರವನ್ನ ಮೊದಲೇ ಮಾಡಿಕೊಂಡಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು ಎಂದು ಚನ್ನಪಟ್ಟಣ ಕ್ಷೇತ್ರದ ಜನ ಹೇಳುತ್ತಿದ್ದಾರೆ. ಕ್ಷೇತ್ರದ ಜನ ಅವರಿಗೆ ಮನ್ನಣೆ ನೀಡಬಾರದು ಎಂದರು.
Also read: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಚನ್ನಪಟ್ಟಣ ಕ್ಷೇತ್ರದ ಜನರು ಪುಣ್ಯವಂತರು ಅನ್ಸುತ್ತೆ ನೀವು ಗೆಲ್ಲಿಸಿ ಕಳುಹಿಸಿದ ಹೆಚ್.ಡಿ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಕೇಂದ್ರ ಸಚಿವರಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೊತೆಗೆ ರಾಜ್ಯದ ಒಳಿತಿಗಾಗಿ ಅವರು ದುಡಿಯುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಕೈಕೊಟ್ಟು ಕಾಂಗ್ರೆಸ್ ಗೆ ಹೋಗಿರೋ ಕಾರಣದಿಂದಾಗಿ ನಿಖಿಲ್ ಕುಮಾರಸ್ವಾಮಿರವರಿಗೆ ಎನ್ಡಿಎ ಟಿಕೆಟ್ ನೀಡಲಾಗಿದೆ ಎಂದರು
ನಿಖಿಲ್ ಕುಮಾರಸ್ವಾಮಿರವರು ಕೂಡ ತಂದೆಯವರಂತೆ ಜನರ ಒಳಿತಿನ ಬಗ್ಗೆ ಚಿಂತಿಸುವ ಯುವಕರಾಗಿದ್ದಾರೆ. ಅವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ. ಕ್ಷೇತ್ರದ ಜನತೆ ನಿಖಿಲ್ ಕೈ ಬಿಡಬಾರದು. ನಿಖಿಲ್ ಪರವಾಗಿ ಮತ ಚಲಾಯಿಸುವ ಮೂಲಕ ಭರ್ಜರಿ ಬಹುಮತದ ಗೆಲುವು ನೀಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅವರೊಂದಿಗೆ ಜೆಡಿಎಸ್ ರಾಜ್ಯ ವಕ್ತಾರ ಸಿಎಂ ನಾಗರಾಜ, ಚನ್ನಪಟ್ಟಣ ನಗರಸಭೆಯ ಸದಸ್ಯ ಮಂಜುನಾಥ ಸೇರಿದಂತೆ ಅನೇಕರಿದ್ದರು. ಈ ವೇಳೆ ವಿವಿಧ ಗ್ರಾಮಗಳ ಅನೇಕ ಜನರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ವೇಳೆ ಬಿ.ವೈ ವಿಜಯೇಂದ್ರರವರ ಜನ್ಮ ದಿನದ ಅಂಗವಾಗಿ ಎನ್ಡಿಎ ಕಛೇರಿಯಲ್ಲಿ ಕೇಕ್ ಕತ್ತರಿಸಿ ಶುಭ ಕೋರಿದರು.
ಬಳಿಕ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಮಾಜಿ ಪ್ರಧಾನ ಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡರವರ ನೇತೃತ್ವದಲ್ಲಿ ಚನ್ನಪಟ್ಟಣ ಕ್ಷೇತ್ರದ ಕೋಡಂಬಹಳ್ಳಿಯಲ್ಲಿ ನಡೆದ ಮತಯಾಚನೆ, ಚನ್ನಪಟ್ಟಣ ನಗರದ ಎನ್ಡಿಎ ಕಛೇರಿಯಲ್ಲಿ ಕೇಂದ್ರ ಸಚಿವರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರರವರು ಸೇರಿದಂತೆ ಎನ್ಡಿಎ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post