ಕಲ್ಪ ಮೀಡಿಯಾ ಹೌಸ್ | ಚನ್ನರಾಯಪಟ್ಟಣ |
ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಿಕ್ಕೋನಹಳ್ಳಿ ಗೇಟ್ ಬಳಿಯ ಎನ್’ಎಚ್ 75ರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಪಲ್ಟಿಯಾಗಿದ್ದು, ಲಾರಿಯ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ಮಂಗಳೂರು ಜಿಲ್ಲೆಯ ಬಣತಾಡಿ ಗ್ರಾಮದ ಉರ್ಮ್ಮ ಸಲ್ಮನ್ ಫಾರಿಶ್ (18) ಎಂದು ಗುರುತಿಸಲಾಗಿದೆ.
ಪ್ಲೈವುಡ್ ತುಂಬಿದ ಲಾರಿಯೊಂದು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಲಾರಿಯು ಅತಿ ವೇಗದಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಈ ವೇಳೆ ಲಾರಿಯ ಕ್ಲೀನರ್ ಆಗಿದ್ದ ಉಮ್ಮರ್ ಸಲ್ಮನ್ ಫಾರಿಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















