ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದೀಚೆಗೆ ಕೊರೋಪಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಿಂದ ಆಗಮಿಸುತ್ತಿರುವವರಲ್ಲೇ ಹಾಗೂ ಅವರಿಂದಲೇ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನಿಂದ ಆಗಮಿಸುವವರ ತಪಾಸಣೆ ನಡೆಸಿ, ಮಾಹಿತಿ ಪಡೆಯುವ ಸಲುವಾಗಿ ಹಂಚಿನ ಸಿದ್ದಾಪುರ, ಹೊಳೆಹೊನ್ನೂರು ಸೇರಿದಂತೆ ಕೆಲವು ಕಡೆ ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸಲಾಗುತ್ತಿದೆ.
Get In Touch With Us info@kalpa.news Whatsapp: 9481252093















