No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

ರೋಗಿಗಳಿಗೆ ಮಾನಸಿಕ ಧೈರ್ಯ ತುಂಬಿ: ವೈದ್ಯರಿಗೆ ಸಂಸದ ರಾಘವೇಂದ್ರ ಕಿವಿಮಾತು

kalpa News by kalpa News
June 15, 2026
in ಶಿವಮೊಗ್ಗ
0
Narayana Super Specialty Clinic Shivamogga
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕ್ಯಾನ್ಸರ್ ರೋಗಿಗಳಿಗೆ ಕೇವಲ ವೈದ್ಯಕೀಯ ಚಿಕಿತ್ಸೆ ನೀಡುವುದು ಮಾತ್ರವಲ್ಲದೆ, ಅವರಲ್ಲಿ ಮಾನಸಿಕ ಧೈರ್ಯ ಮತ್ತು ಜೀವನದ ಬಗ್ಗೆ ವಿಶ್ವಾಸ ತುಂಬುವ ಕೆಲಸವನ್ನು ವೈದ್ಯರು ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕಿವಿಮಾತು ಹೇಳಿದರು.

ನಗರದ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ನೂತನವಾಗಿ ಆರಂಭಿಸಲಾದ ಎಂಡೋಸ್ಕೋಪಿ ಮತ್ತು ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ನೂತನ ಸೇವೆಗಳ ಸೇರ್ಪಡೆಯಿಂದ ಶಿವಮೊಗ್ಗದ ವೈದ್ಯಕೀಯ ಕ್ಷೇತ್ರಕ್ಕೆ ಮತ್ತೊಂದು ಗರಿಮೆ ಒದಗಿದಂತಾಗಿದೆ ಎಂದು ಅವರು ಬಣ್ಣಿಸಿದರು.

Also Read>> ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

ಪ್ರಸ್ತುತ ದಿನಗಳಲ್ಲಿ ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಾಸರಿ ಪ್ರತಿ ಕುಟುಂಬದಲ್ಲೂ ಇಂತಹ ಸಮಸ್ಯೆಗಳು ಕಂಡುಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕೀಮೋಥೆರಪಿ ಚಿಕಿತ್ಸೆ ಪಡೆಯುವ ರೋಗಿಗಳು ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಿರುವುದರಿಂದ, ನಗರದ ಮಧ್ಯಭಾಗದಲ್ಲಿಯೇ ಡೇ-ಕೇರ್ ಸೆಂಟರ್ ಆರಂಭಿಸಿರುವುದು ರೋಗಿಗಳಿಗೆ ತ್ವರಿತ ಹಾಗೂ ಸುಲಭ ಚಿಕಿತ್ಸೆ ಪಡೆಯಲು ಹೆಚ್ಚು ಅನುಕೂಲಕರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಸಾರ್ವಜನಿಕರು ವೈದ್ಯರನ್ನು ತಮ್ಮ ಮನೆಗಳಲ್ಲಿ ದೇವರಂತೆ ಕಾಣುತ್ತಾರೆ. ಆ ಪವಿತ್ರ ನಂಬಿಕೆ ಮತ್ತು ಸ್ಥಾನಮಾನವನ್ನು ಉಳಿಸಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ವೈದ್ಯಕೀಯ ತಂಡದ ಮೇಲಿದೆ ಎಂದು ಅಭಿಭಪ್ರಾಯ ವ್ಯಕ್ತಪಡಿಸಿದರು.

ನಾರಾಯಣ ಹೆಲ್ತ್ ಸಂಸ್ಥಾಪಕ ಡಾ. ದೇವಿ ಶೆಟ್ಟಿ ಅವರ ಸೇವೆಯನ್ನು ಶ್ಲಾಘಿಸಿದ ಸಂಸದರು, ಕೋವಿಡ್ ಸಂಕಷ್ಟದ ಸಮಯದಲ್ಲಿ ಇಡೀ ದೇಶಕ್ಕೆ ಮತ್ತು ಸರ್ಕಾರಕ್ಕೆ ಅವರು ನೀಡಿದ ಮಾರ್ಗದರ್ಶನವನ್ನು ಸ್ಮರಿಸಿದರು. ಇದೇ ವೇಳೆ, ಈ ಹೊಸ ಸೇವೆಗಳ ವಿಸ್ತರಣೆಗೆ ಕಾರಣರಾದ ಕರ್ನಾಟಕ ಕ್ಲಸ್ಟರ್’ನ ನಿರ್ದೇಶಕ ಡಾ. ವಿಜಯ್ ಸಿಂಗ್ ಮತ್ತು ಫೆಸಿಲಿಟಿ ನಿರ್ದೇಶಕ ಡಾ. ಉತ್ತಮ ಶರ್ಮ ಅವರನ್ನು ಸಂಸದರು ಅಭಿನಂದಿಸಿದರು.

Also Read>> JNNCE: ಸಿಇಟಿ/ಕಾಮೆಡ್-ಕೆ ಸಂವಾದ | ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳು

ಮಧ್ಯ ಕರ್ನಾಟಕದ ವೈದ್ಯಕೀಯ ಕೇಂದ್ರವಾಗಿ ಶಿವಮೊಗ್ಗ

ಹಿಂದೆಲ್ಲಾ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳಿದ್ದರೂ ಚಿಕಿತ್ಸೆಗಾಗಿ ಬೆಂಗಳೂರು ಅಥವಾ ಮಣಿಪಾಲಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಆದರೆ, ಇಂದು ಗುಣಮಟ್ಟದ ಯುವ ವೈದ್ಯರ ದಕ್ಷತೆಯಿಂದಾಗಿ ಶಿವಮೊಗ್ಗವು ಇಡೀ ಮಧ್ಯ ಕರ್ನಾಟಕದ ಜನರನ್ನು ಆಕರ್ಷಿಸುವ ಪ್ರಮುಖ ಹೆಲ್ತ್ ಕೇರ್ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ರಾಘವೇಂದ್ರ ಅವರು ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರಿಗೆ ನೂತನ ಸೇವೆ ಸಮರ್ಪಣೆ

ನೂತನವಾಗಿ ಉದ್ಘಾಟನೆಗೊಂಡ ಈ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯವನ್ನು ಸಂಸದರು ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಮರ್ಪಿಸಿದರು.ಪ್ರಧಾನಿ ಮೋದಿಯವರ `ಸ್ವಸ್ಥ ಭಾರತ’ ಪರಿಕಲ್ಪನೆ ಹಾಗೂ ಪ್ರತಿಯೊಬ್ಬ ಜನಸಾಮಾನ್ಯನಿಗೂ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ ಅವರ ಮಹತ್ವಾಕಾಂಕ್ಷೆಯ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ನೂತನ ಕೇಂದ್ರವು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಬಣ್ಣಿಸಿದರು.

ದೇಶದ ಮೂಲೆಮೂಲೆಗೂ ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವ ಪ್ರಧಾನಮಂತ್ರಿಯವರ ದೂರದೃಷ್ಟಿಯ ಗುರಿಗೆ ಪೂರಕವಾಗಿ ಈ ನೂತನ ಕೀಮೋಥೆರಪಿ ಮತ್ತು ಎಂಡೋಸ್ಕೋಪಿ ಡೇ-ಕೇರ್ ಕ್ಲಿನಿಕ್ ಜನಸೇವೆಗೆ ಮುಡಿಪಾಗಿರಲಿದೆ ಎಂದು ಇದೇ ಸಂದರ್ಭದಲ್ಲಿ ಹೆಮ್ಮೆಯಿಂದ ನುಡಿದರು.

ಸಾಗರ | ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ | ಏನಾಯ್ತು?

ಮೆಡಿಕಲ್ ಅಂಕಾಲಜಿಸ್ಟ್ ಡಾ. ಅಪರ್ಣ ಶ್ರೀವತ್ಸ ಮಾತನಾಡಿ, ಹಿಂದಿನ ದಿನಗಳಿಗೆ ಹೋಲಿಸಿದರೆ ಈಗ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಹೊಸ ತಂತ್ರಜ್ಞಾನಗಳು ನವೀನ ಆವಿಷ್ಕಾರಗಳು ತುಂಬಾ ಪರಿಣಾಮಕಾರಿಯಾದ ಔಷಧಿಗಳು ಲಭ್ಯವಿರುವುದರಿಂದ ಕ್ಯಾನ್ಸರ್ ರೋಗಿಗಳು ಗುಣಮುಖವಾಗುವ ಸಾಧ್ಯತೆಗಳು ಅತಿ ಹೆಚ್ಚು ಆಗಿವೆ ಎಂದರು.

ಇದೀಗ ಕಿಮೋ ತೆರಪಿ ಜೊತೆ ಜೊತೆಗೆ ಇಮಿನೋಥೆರಪಿ ಹಾಗೂ ಟಾರ್ಗೆಟ್ ಥೆರಪಿ ಲಭ್ಯವಿದೆ ಎಂದರು.

ನಾರಾಯಣ ಹೆಲ್ತ್ ಕರ್ನಾಟಕ ಕ್ಲಸ್ಟರ್ ಹಾಗೂ ಗ್ರೋಥ್ ಇನಿಷಿಯೇಟಿವ್ ನಿರ್ದೇಶಕರಾದ ಡಾ. ವಿಜಯ ಸಿಂಗ್ ಅವರು ಮಾತನಾಡಿದರು.
ಸಮಾರಂಭದಲ್ಲಿ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಉತ್ತಮ ಶರ್ಮ, ಮೆಡಿಕಲ್ ಸೂಪರ್ಡೆಂಟ್ ಡಾ. ಚಕ್ರವರ್ತಿ ಸೊಂಡೂರು, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಎಸ್.ಎಸ್. ಶೈಲೇಶ್ ಸೇರಿದಂತೆ ಪ್ರಮುಖ ವೈದ್ಯರ ತಂಡ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Chemotherapy Day-CareEndoscopyHealth NewsHospital NewsKannada News WebsiteLatest News KannadaMP B Y RagahvendraNarayana Super Specialty Clinicಎಂಡೋಸ್ಕೋಪಿಕೀಮೋಥೆರಪಿ ಡೇ-ಕೇರ್ಕ್ಯಾನ್ಸರ್ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ಬಿ.ವೈ. ರಾಘವೇಂದ್ರವೈದ್ಯಕೀಯ ಸೌಲಭ್ಯಶಿವಮೊಗ್ಗ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

Next Post

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

kalpa News

kalpa News

Next Post
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL