ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಸುಧಾರಿತ ನ್ಯಾವಿಗೇಷನ್ ಉಪಗ್ರಹ ಜಿಎಸ್‌ಎಲ್‌ವಿ – ಎಫ್12 (GSLV-F12) ಮತ್ತು ಎನ್‌ವಿಎಸ್ -01 (NVS-01) ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀಹರಿಕೋಟಾದಿಂದ ಇಂದು ಉಡಾವಣೆ ಮಾಡಿದೆ.
Lift-off images📸 pic.twitter.com/QnCRYJondb
— ISRO (@isro) May 29, 2023
51.7 ಮೀಟರ್ ಎತ್ತರದ ಜಿಯೋಸಿಂಕ್ರೊನಸ್ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ ನ್‌ವಿಎಸ್ -01 ಅನ್ನು ಇಂದು ಬೆಳಿಗ್ಗೆ 10.42ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 130 ಕಿ.ಮೀ. ದೂರದ ಎರಡನೇ ಉಡಾವಣಾ ಕೇಂದ್ರದಿಂದ ನಡೆಸಲಾಗಿದೆ.
ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಉಡಾವಣೆ ಮಾಡಲಾಗಿರುವ ಈ ಉಪಗ್ರಹ, ಸುಮಾರು 20 ನಿಮಿಷಗಳ ನಂತರ ಹಾರಾಟ ನಡೆಸಿದೆ ಎಂದು ಇಸ್ರೋ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post