ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ #Annamalai ಹೊಸ ಪ್ರಯತ್ನಕ್ಕೆ ಮುಂದಾಗಿದ್ದು, ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ #Oxford University ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ.
ಹೌದು, ಇಂಗ್ಲೆಂಡ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಕೋರ್ಸ್‌ಗಾಗಿ ಇಂದು ಮಧ್ಯರಾತ್ರಿ ಲಂಡನ್‌ಗೆ ತೆರಳುತ್ತಿರುವ ಅಣ್ಣಾಮಲೈ ಜನವರಿ ತಿಂಗಳವರೆಗೆ ಅಲ್ಲಿಯೇ ತಂಗಿ ಓದಲಿದ್ದಾರೆ. ಇದರಿಂದಾಗಿ ಸುಮಾರು 4 ತಿಂಗಳು ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಇಲ್ಲದಂತಾಗಿದೆ. ಹೀಗಾಗಿ ತಮಿಳುನಾಡು ಬಿಜೆಪಿಗೆ ಹಂಗಾಮಿ ಅಧ್ಯಕ್ಷರಾಗಿ ಯಾರನ್ನು ನೇಮಿಸಬಹುದು ಎಂದು ಬಿಜೆಪಿ ರಾಷ್ಟ್ರೀಯ ನಾಯಕತ್ವ ಚಿಂತನೆ ನಡೆಸಿದೆ.
2026 ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಅಣ್ಣಾಮಲೈ ಕೆಲಸ ಮಾಡುತ್ತಿದ್ದಾಗ, ಇದ್ದಕ್ಕಿದ್ದಂತೆ ರಾಜಕಾರಣಕ್ಕೆ ತಾತ್ಕಾಲಿಕ ಬ್ರೇಕ್ ನೀಡಿ ಲಂಡನ್‌ನಲ್ಲಿ ಓದಲು ತೆರಳುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post