ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪಥನಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ತಮಿಳುನಾಡಿನ ಊಟಿ ಸನಿಹದ ಕೂಲೂರು ಬಳಿಯಲ್ಲಿ ಹೆಲಿಕಾಪ್ಟರ್ ಪಥನಗೊಂಡಿದ್ದು, ದುರ್ಘಟನೆಗೆ ಕಾರಣ ತಿಳಿದುಬಂದಿಲ್ಲ.
ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. 
ಬಿಪಿನ್ ರಾವತ್ ಅವರೊಂದಿಗೆ ಅವರ ಪತ್ನಿ, ಕುಟುಂಬಸ್ಥರು ಹಾಗೂ ಹಿರಿಯ ಅಧಿಕಾರಿಗಳು ಇದ್ದರು. ವಿಷಯ ತಿಳಿದಾಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದವರ ಸುರಕ್ಷತೆ ಅಥವಾ ಅವರ ಪರಿಸ್ಥಿತಿ ಏನಾಗಿದೆ ಎಂಬುದರ ಕುರಿತಾಗಿ ಖಚಿತ ಮಾಹಿತಿ ವರದಿಯಾಗಿಲ್ಲ.
ನೀಲಗಿರಿ ಅರಣ್ಯ ಪ್ರದೇಶದಲ್ಲಿ ಪತಕ್ಕೀಡಾದ ವೇಳೆ ಸೇನಾ ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ಹೆಲಿಕಾಪ್ಟರ್ ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಘಟನೆಯ ವಿವರ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















