ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಹಾಗೂ ಓಮ್ನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ, 60 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ಚೆಟ್ಟಿಯಪ್ಪನೂರು ಬಳಿಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈ ನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 60 ಪ್ರಯಾಣಿಕರು ಗಾಯಗೊಂಡಿದ್ದಾರೆ.
Also read: ಮತ್ತೆ ಏರಿಕೆಯಾಗಲಿದೆಯಾ ನಂದಿನಿ ಹಾಲಿನ ದರ?


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















