ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ದಂತಚೋರ, ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ Veerappan daughter Vidhyarani ಲೋಕಸಭಾ ಚುನಾವಣೆಗೆ Loksabha election ಸ್ಪರ್ಧಿಸುತ್ತಿದ್ದು, ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ `ನಾಮ್ ತಮಿಳರ್ ಕಚ್ಚಿ(ಎನ್ಟಿಕೆ) ಪಕ್ಷದಿಂದ ಅವರು ಕಣಕ್ಕೆ ಇಳಿಯುತ್ತಿದ್ದಾರೆ.
ಚೆನ್ನೈನಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಹಾಗೂ ಪುದುಚೇರಿಯ ಒಟ್ಟು 40 ಕ್ಷೇತ್ರಗಳಲ್ಲಿ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾ ರಾಣಿ ಕೃಷ್ಣಗಿರಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ.
Also read: ಸೊರಬ | ಚಂದ್ರಗುತ್ತಿ ದೇವಾಲಯಕ್ಕೆ ನಟ ಶಿವರಾಜಕುಮಾರ್ ದಂಪತಿ
ವಕೀಲೆಯಾಗಿರುವ ವಿದ್ಯಾರಾಣಿ ಕೃಷ್ಣಗಿರಿಯಲ್ಲಿ ಶಾಲೆ ನಡೆಸುತ್ತಿದ್ದಾರೆ. 2020ರ ಜುಲೈನಲ್ಲಿ ಬಿಜೆಪಿ ಸೇರಿ ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದರು. ಇತ್ತೀಚೆಗೆ ಆ ಪಕ್ಷವನ್ನು ತೊರೆದು ಎನ್ಟಿಕೆಗೆ ಸೇರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post