ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಟಿ ಹಾಗೂ ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ಇಂದು ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ವಲ್ಲುವರ್ ಕೊಟ್ಟಮ್ ಬಳಿ ಜಾನಪದ ಕಲಾತಂಡಗಳೊಂದಿಗೆ ಖುಷ್ಬೂ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಳೆದ ವರ್ಷ ಕಾಂಗ್ರೆಸ್ ತ್ಯಜಿಸಿದ್ದ ಖುಷ್ಬೂ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿರುವ ಖುಷ್ಬೂ ಡಿಎಂಕೆ ಅಭ್ಯರ್ಥಿ ಡಾ. ಎಳಿಲನ್ ವಿರುದ್ಧ ಕಣಕ್ಕೆ ಇಳಿದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post