ಕಲ್ಪ ಮೀಡಿಯಾ ಹೌಸ್
ಚೆನ್ನೈ: ಕೊರೋನಾ ಎರಡನೆಯ ಅಲೆಯು ಹೆಚ್ಚಾಗುತ್ತಿರುವ ನಡುವೆ ದೇಶದಲ್ಲಿ ರಾಜಕೀಯ ರ್‍ಯಾಲಿಗಳಿಗೆ ಭಾರತೀಯ ಚುನಾವಣಾ ಆಯೋಗ ಅವಕಾಶ ನೀಡಿರುವುದನ್ನು ಮದ್ರಾಸ್ ಹೈಕೋರ್ಟ್ ಖಂಡಿಸಿದೆ. ಹಾಗೂ ಬಹಳಷ್ಟು ಸಾರ್ವಜನಿಕರ ಸಾವಿಗೆ ಕಾರಣವಾಗಿರುವ ಚುನಾವಣಾ ಆಯೋಗದ ವಿರುದ್ಧ ದೂರು ದಾಖಲಾಗುಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಕೊರೋನಾ ಎರಡನೆಯ ಅಲೆ ಹೆಚ್ಚಾಗಿರುವುದಕ್ಕೆ ಆಯೋಗವೇ ಕಾರಣವಾಗಿದ್ದು, ರ್‍ಯಾಲಿಗಳಲ್ಲಿ ಕೊರೋನಾ ಮಾರ್ಗಸೂಚಿಯನ್ನು ಕಟ್ಟಿನಿಟ್ಟಿನಲ್ಲಿ ಪಾಲನೆ ಮಾಡಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳುವಲ್ಲಿ ಆಯೋಗ ವಿಫಲವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ಆರೋಗ್ಯವು ಅತಿ ಮುಖ್ಯಮಾಗಿದ್ದು, ನಾಗರಿಂದಲೇ ಪ್ರಜಾಪ್ರಭುತ್ವ ಗಣರಾಜ್ಯವು ಖಾತರಿಪಡಿಸು ಹಕ್ಕುಗಳನ್ನು ಸಂಭ್ರಮಸಲು ಸಾಧ್ಯವಾಗುತ್ತದೆ. ಇದನ್ನು ಅಧಿಕಾರಿಗಳು ಮರೆತಿರುವುದು ವಿಷಾದಕರ ಸಂಗತಿಯಾಗಿದ್ದು, ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಪ್ರಸಕ್ತ ವರ್ಷ ಏಪ್ರಿಲ್ 6ರಂದು ತಮಿಳುನಾಡಿನಲ್ಲೂ ಕೂಡ ಚುನಾವಣೆ ನಡೆದಿದ್ದು, ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಿನಲ್ಲಿ ಪಾಲನೆ ಮಾಡದಿದ್ದಲ್ಲೆ ಮೇ.2ರಂದು ನಡೆಯಲಿರುವ ಎಣಿಕೆ ಕಾರ್ಯಕ್ಕೆ ತಡೆ ನೀಡಲಾಗುವುದು. ಹಾಗೂ ರಾಜ್ಯ ಆರೋಗ್ಯ ಕಾರ್ಯದರ್ಶಿಯೊಂದಿಗೆ ಸಮಾಲೋಚನೆ ನಡೆಸಿ ಏ.30ರೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಮೇ.2ರ ಎಣಿಕೆ ಕಾರ್ಯಕ್ಕೆ ತಡೆ ನೀಡಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post