ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ Actor Kamal Hasan ತಿಳಿಸಿದ್ದಾರೆ.
ಚೆನ್ನೈನಲ್ಲಿ ಎಂಎನ್‌ಎಂನ 7ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ತಮ್ಮ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಇನ್ನೂ ಇಂಡಿಯಾ ಬ್ಲಾಕ್ಗೆ ಸೇರಿಲ್ಲ. ಪಕ್ಷ ರಾಜಕೀಯವನ್ನು ಸಮಾಧಿ ಮಾಡಿ ರಾಷ್ಟ್ರದ ಬಗ್ಗೆ ಯೋಚಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















