ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರಿಗೆ ತೀವ್ರ ನಿಗಾಘಟಕದಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.
ಈ ಕುರಿತಂತೆ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕೋವಿಡ್19 ವೈರಸ್ ಸೋಂಕಿನಿಂದ ಬಳಲುತ್ತಿರುವ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕ ಸ್ಥಿತಿಯಲ್ಲೇ ಮುಂದುವರೆದಿದೆ. ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದ್ದು, ಉನ್ನತ ಮಟ್ಟದ ತಜ್ಞ ವೈದ್ಯರ ತಂಡ ನಿರಂತರವಾಗಿ ಅವರ ಆರೋಗ್ಯದ ಕುರಿತಾಗಿ ನಿಗಾ ವಹಿಸಿದೆ ಎಂದು ತಿಳಿಸಿದೆ.
Get In Touch With Us info@kalpa.news Whatsapp: 9481252093

















