ಕಲ್ಪ ಮೀಡಿಯಾ ಹೌಸ್ | ಚೆನ್ನೈ |
1971ರ ಜನಸಂಖ್ಯೆಯನ್ನೇ ಆಧಾರವಾಗಿ ಇರಿಸಿಕೊಂಡು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡನೆ #Loksabha Constituency Reallocation ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ #M K Stalin ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯನ್ನು ಇನ್ನೂ ಮೂವತ್ತು ವರ್ಷಗಳ ಕಾಲ 1971ರ ಜನಸಂಖ್ಯೆಯನ್ನು ಆಧಾರವಾಗಿ ಇರಿಸಿಕೊಂಡೇ ಮಾಡಬೇಕು. ಹೀಗೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Also read: ರೈತರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಪ್ರಧಾನಿ ಮೋದಿ ಸರ್ಕಾರ | ಏನದು?
2026ರ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಪರಿಣಾಮದ ಕುರಿತು ಚರ್ಚಿಸಲು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 1971ರ ಜನಸಂಖ್ಯೆಯನ್ನೇ ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ಮಾಡಬೇಕು ಎಂದು ಸ್ಟಾಲಿನ್ ಅವರು ನಿರ್ಣಯ ಮಂಡಿಸಿದರು.
ದಕ್ಷಿಣ ರಾಜ್ಯಗಳು ಮಾಡಿದಂತೆ ಭಾರತದ ಎಲ್ಲಾ ರಾಜ್ಯಗಳು ಪರಿಣಾಮಕಾರಿ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲು ಇದು ಪ್ರೋತ್ಸಾಹಿಸುತ್ತದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post