ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತೆ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ (78) Vani Jairam ವಿಧಿವಶರಾಗಿದ್ದು, ತಲೆಗೆ ಪೆಟ್ಟು ಬಿದ್ದು ಗಾಯಗೊಂಡು ನಿಧನರಾಗಿದ್ದಾರೆ ಎನ್ನಲಾಗಿದೆ.
ವಾಣಿ ಜೈರಾಮ್ ಇತ್ತೀಚೆಗೆ ವೃತ್ತಿಪರ ಗಾಯಕಿಯಾಗಿ 50 ವರ್ಷಗಳನ್ನು ಪೂರೈಸಿದ್ದು, 16 ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಹಾಗೂ ಕನ್ನಡದಲ್ಲಿ 600ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Also read: ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾಕಿರಣ: ಪ್ರೊ.ಬಿ.ಪಿ. ವಿರಭದ್ರಪ್ಪ ಅಭಿಪ್ರಾಯ
ಎಂಎಸ್ ವಿಶ್ವನಾಥನ್, ಕೆವಿ ಮಹದೇವನ್, ಚಕ್ರವರ್ತಿ, ಇಳಯರಾಜ, ಮತ್ತು ಸತ್ಯಂ ಸೇರಿದಂತೆ ಅನೇಕ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದು, ಅವರ ಹಿನ್ನೆಲೆ ಗಾಯನಕ್ಕಾಗಿ ಮೂರು ಬಾರಿ ರಾಷ್ಟ್ರಪ್ರಶಸ್ತಿ ಹಾಗೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಗುಜರಾತ್, ಒಡಿಶಾ ರಾಜ್ಯಗಳಿಂದಲೂ ವಿವಿಧ ಪುರಸ್ಕಾರಗಳಿಗೆ ಪಾತ್ರರಾಗಿದ್ದರು.












Discussion about this post