ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ವಿಶ್ವಾಸಮತ ಯಾಚನೆಯ ಅಗ್ನಿಪರೀಕ್ಷೆಯಲ್ಲಿ ಪಾಸಾಗಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್, Tamilnadu CM Vijay ಇದೀಗ ಮಹತ್ವದ ಹಂತದಿಂದ ಪಾಸಾಗಿದ್ದಾರೆ.
234 ಶಾಸಕರನ್ನು ಹೊಂದಿರುವ ವಿಧಾನಸಭೆಯಲ್ಲಿ ವಿಜಯ್ ಅವರ ನೂತನ ಸರ್ಕಾರಕ್ಕೆ 144 ಶಾಸಕರು ಬೆಂಬಲ ಸೂಚಿಸಿದ್ದಾರೆ.

ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.
Also read: ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ
ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಆದರೆ ಸದನದಲ್ಲಿದ್ದ 22 ಎಐಎಡಿಎಂಕೆ ಶಾಸಕರು ವಿಶ್ವಾಸಮತದ ವಿರುದ್ಧ ಮತ ಹಾಕಿದರು.
ವಿಜಯ್ ತಿರುಚಿ ಪಶ್ಚಿಮ ಮತ್ತು ಪೆರಂಬೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಹಿನ್ನೆಲೆ ಅದನ್ನು ಒಂದು ಎಂದು ಪರಿಗಣಿಸಲಾಗುತ್ತದೆ. ಇದರ ಜೊತೆಗೆ ತಿರುಪತ್ತೂರು ಟಿವಿಕೆ ಶಾಸಕ ಶ್ರೀನಿವಾಸ್ ಸೇತುಪತಿ ಅವರಿಗೆ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಭಾಗಿಯಾಗದಂತೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆ ವಿಧಾನಸಭೆಯ ಬಲ 232ಕ್ಕೆ ಇಳಿದಿದ್ದು, ಬಹುಮತಕ್ಕೆ 116 ಶಾಸಕರ ಬೆಂಬಲ ಅಗತ್ಯವಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















