ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ಸಂಭವಿಸಿದ ನಕಲಿ ಮದ್ಯಸೇವನೆ ದುರಂತಕ್ಕೆ #Liquor Tragedy ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ದುರಂತಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
Also read: ಸಮರ್ಪಕ ಮೌಲಸೌಕರ್ಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಶಾಸಕ ಶೈಲೇಂದ್ರ ಬೆಲ್ದಾಳೆ
ಈ ಕುರಿತು ಸ್ಟಾಲಿನ್ #Stalin ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದು, ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದವರ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದ್ದು, ಇದನ್ನು ತಡೆಯುವಲ್ಲಿ ವಿಫಲರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಅಕ್ರಮ ಮದ್ಯ ಮಾರಾಟ ಕುರಿತು ಜನರು ಮಾಹಿತಿಯನ್ನು ಹಂಚಿಕೊಂಡರೆ ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧಗಳನ್ನು ಹತ್ತಿಕ್ಕಲಾಗುವುದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post