ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಭಾರತೀಯ ಸಿನಿಮಾ ರಂಗದ ಹೆಸರಾಂತ ಗಾಯಕಿ ವಾಣಿ ಜಯರಾಂ Vani Jayaram ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅಹಿತಕರ ಘಟನೆ ನಡೆದಿರುವ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ.
ಶನಿವಾರ ತಮ್ಮ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಅವರ ತಲೆಯಲ್ಲಿ ಗಾಯದ ಗುರುತು ಮತ್ತು ಬಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಪೊಲೀಸರು ಅಸಹಜ ಸಾವು ಎಂದು ಕೇಸು ದಾಖಲಿಸಿ, ವಾಣಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿತ್ತು.

Also read: ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ
ಘಟನೆಗೆ ಸಂಬಂಧಪಟ್ಟಂತೆ ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನು ಗಮನಿಸಿರುವ ಪೊಲೀಸರಿಗೆ ಯಾರ ಸುಳಿವೂ ದೊರೆತಿಲ್ಲ. ಮತ್ತು ಅವರ ಮನೆಗೆ ಯಾರೂ ಪ್ರವೇಶ ಮಾಡಿಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದೆ.












Discussion about this post