ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗಳ ಪ್ರವಾಸದ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದ್ದು, ಇದರಂತೆ ನ.29ರಂದು ಬೆಳಗ್ಗೆ 9.30ಕ್ಕೆ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಕುವೆಂಪು ವಿವಿ ಆಯೋಜಿಸಿರುವ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಸಹ್ಯಾದ್ರಿ ಕಲಾ ಕಾಲೇಜಿನ ದ್ವಾರ ಮತ್ತು ಪುರುಷ ವಿದ್ಯಾರ್ಥಿಗಳ ನಿಲಯದ ವಿಸ್ತರಣಾ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
12.30ಕ್ಕೆ ಪಿಇಎಸ್ ಕಾಲೇಜು ಹಿಂಭಾಗದಲ್ಲಿ ನಿರ್ಮಿಸಿರುವ ಕಿಮ್ಮನೆ ಗಾಲ್ಫ್ ರೆಸಾರ್ಟ್ ಉದ್ಘಾಟಿಸಲಿರುವ ಮುಖ್ಯಮಂತ್ರಿಗಳು, ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post