ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ದೊಡ್ಡ ರಾಜಕೀಯ ಶಾಕ್ ಎದುರಾಗಿದೆ. ಸಚಿವ ಸ್ಥಾನದಲ್ಲಿದ್ದ ರಾಮಲಿಂಗಾರೆಡ್ಡಿ #Ramalingareddy ಅವರು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ.
ಸಚಿವ ಸಂಪುಟದಲ್ಲಿ ತಮಗೆ ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ರೆಡ್ಡಿ ತಿಳಿಸಿದ್ದಾರೆ. ಬದಲಾಗಿ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Also Read>> ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ
ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿಂದೆ ಎರಡು ಬಾರಿ ನನ್ನನ್ನು ಕರೆದು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. ಈಗ ಆ ಮಾತು ತಪ್ಪಲಾಗಿದೆ. ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.
ಹಾಗೇ, “ನನ್ನ ನಿರ್ಧಾರ ಅಂತಿಮ. ಯಾರ ಮನವೊಲಿಕೆಗೂ ಬಗ್ಗುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿರುವುದಾಗಿ ತಿಳಿಸಿದರು.
1973ರಿಂದಲೇ ರಾಜಕೀಯ ಜೀವನ ಆರಂಭಿಸಿರುವ ರೆಡ್ಡಿ, ಹಲವು ಬಾರಿ ಸಚಿವರಾಗಿದ್ದೇನೆ. ಯಾವುದೇ ಖಾತೆಗಾಗಿ ನಾನು ಲಾಬಿ ಮಾಡಿಲ್ಲ. ಆದರೆ ಕೊಟ್ಟ ಮಾತು ಉಳಿಸದಿರುವುದು ಬೇಸರ ತಂದಿದೆ ಎಂದು ಹೇಳಿದರು.
Also Read>> ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ
2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂತು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ.
ರಾಜಕೀಯ ಪರಿಣಾಮ:
ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಉಂಟಾದ ಈ ಬೆಳವಣಿಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರಂಭದಲ್ಲೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















