ಬೆಂಗಳೂರು: ರಾಜ್ಯ ರಾಜಕೀಯವನ್ನು ಅಲ್ಲೋಲ ಕಲ್ಲೋಲಗೊಳಿಸಿರುವ ಬಂಡಾಯ ಶಾಸಕರ ರಾಜೀನಾಮೆ ಪ್ರಹಸನ ಮುಂದುವರೆದಿದ್ದು, ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚಿಸುವುದಾಗಿ ಹೇಳಿದ್ದಾರೆ.
ಈ ಕುರಿತಂತೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಿದ್ದೇನೆ. ಸದನದ ಬೆಂಬಲವಿದ್ದಾಗ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರೆಯಬಹುದು. ಈ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದೇನೆ ಎಂದರು.
ಈ ಹಿನ್ನೆಲೆಯಲ್ಲಿ ವಿಶ್ವಾಸ ಮತಯಾಚನೆಗೆ ಸಮಯ ನಿಗದಿ ಮಾಡಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಿಎಂ ಮನವಿ ಮಾಡಿದರು.
ಇದರ ನಡುವೆಯೇ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
Discussion about this post