ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹತ್ವದ ಬೆಳವಣಿಗೆಯಲ್ಲಿ ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್ ಸೇರಿ ಮೂರು ಬ್ಯಾಂಕ್’ಗಳ ಹಗರಣವನ್ನು ಸಿಬಿಐ #CBI ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಅನುಮೋದನೆ ನೀಡಿದ್ದಾರೆ.
ಈ ಕುರಿತಂತೆ ಮಹತ್ವದ ನಿರ್ಣಯ ಕೈಗೊಂಡಿರುವ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ #VasishtaBank ಮತ್ತು ಗುರು ಸಾರ್ವಭೌಮ ಬ್ಯಾಂಕ್’ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.
ಈ ಬ್ಯಾಂಕ್ ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿದ್ದರು. ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು.
ಮೂರೂ ಬ್ಯಾಂಕ್ ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಸೂಚಿಸಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















