ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಠಾಣೆಯ ಮಹಿಳಾ ಹೆಡ್ ಕಾನ್ಸ್’ಟೇಬಲ್ ನಾಗರತ್ನ ಅವರ ಉತ್ತಮ ಕಾರ್ಯವನ್ನು ಶ್ಲಾಘಿಸಿ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗಿದೆ.
ಚಳ್ಳಕೆರೆ ಪೋಲೀಸ್ ಠಾಣೆ ಹೆಡ್ ಕಾನ್ಸ್’ಟೇಬಲ್ ಆಗಿದ್ದು ಎಸ್’ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಉತ್ತಮ ಸೇವೆ ಗುರುತಿಸಿ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದಕ್ಕಾಗಿ ಚಳ್ಳಕೆರೆ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ನಗರ ಪೋಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಿದ್ದಾರೆ.
ಪೋಲೀಸ್ ಇನ್ಸ್’ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ, ಪಿಎಸ್’ಐ ಮಂಜುನಾಥ, ಅರ್ಜನ್ ಲಿಂಗಾರೆಡ್ಡಿ, ಪೋಲಿಸ್ ಸಿಬ್ಬಂದಿಗಳಾದ ತಿಪ್ಪೇಸ್ವಾಮಿ, ಓಬಣ್ಣ, ಮಂಜುನಾಥ, ರವಿ, ಸಂತೋಷ, ಗಂಗಾಧರ, ಶಿವಾನಂದ ಮಡಿವಾಳ ಹಾಗೂ ಮಹಿಳಾ ಸಿಬ್ಬಂದಿಗಳು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post