ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಖಾಸಗಿ ಗಾರ್ಮೆಂಟ್ಸ್’ನಿಂದ ಗೌರಿಬಿದನೂರಿಗೆ ಬರುತ್ತಿದ್ದ ಬಸ್ ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 3 ನೌಕರರ ಸ್ಥಿತಿ ಗಂಭೀರವಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ.
ಕಾರ್ಖಾನೆಯ 55ಕ್ಕೂ ಅಧಿಕ ನೌಕರರು ಬಸ್’ನಲ್ಲಿ ಸಂಚರಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಗೌರಿಬಿದನೂರು ಸಮೀಪದ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಡಿವೈಡರ್’ಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿ ಅದರಲ್ಲಿದ್ದ 3 ನೌಕರರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗಾಯಗೊಂಡ 25 ಜನರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಗೌರಿಬಿದನೂರು ಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post