ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಮಗುವಿನೊಂದಿಗೆ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ #Car accident ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ನಂದಿ ಮೋರಿ ಬಳಿ ನಡೆದಿದೆ.
ಭಾನುಪ್ರಿಯಾ (25) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದ್ದು, ಮಗು ಮನೋಜ್ (4) ಸ್ಥಿತಿ ಗಂಭೀರವಾಗಿದೆ. ಶಾಲೆಯಿಂದ ಮಗುವನ್ನು ಕರೆದುಕೊಂಡು ಬರಲು ಮತ್ತೊಬ್ಬ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ರಸ್ತೆ ಬದಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಾಲಕ ಕಾರಿನ ಸಮೇತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
Also read: ಭದ್ರಾವತಿ | ಕಡದಕಟ್ಟೆ ರೈಲ್ವೆ ಫ್ಲೈಓವರ್ ಓಪನ್’ಗೆ ಮುಹೂರ್ತ ಫಿಕ್ಸ್
ಮಗುವಿನ ತಲೆಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post