ಕಲ್ಪ ಮೀಡಿಯಾ ಹೌಸ್
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಶಾಲೆಗಳನ್ನು ಆಗಸ್ಟ್ 23 ರಿಂದ ಆರಂಭಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗದಲ್ಲಿ 9 ಮತ್ತು 10ನೇ ತರಗತಿಗಳ ಶಾಲೆಗಳನ್ನು ಆರಂಭಿಸುವ ಬಗ್ಗೆ ಪೂರ್ವ ಸಿದ್ಧತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 23 ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಫ್ರೌಢಶಾಲೆಗಳಲ್ಲಿನ 9 ಮತ್ತು 10ನೇ ತರಗತಿಗಳನ್ನು ಅರ್ಧ ದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಕಡ್ಡಾಯವಾಗಿರುತ್ತದೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಮನೆಯಿಂದಲೇ ಕುಡಿಯುವ ನೀರು/ ಉಪಹಾರ ತರಬೇಕು. ಶಾಲೆಗಳಲ್ಲಿಯೂ ಸಹ ಕುಡಿಯಲು ಬಿಸಿ ನೀರಿನ ವ್ಯವಸ್ಥೆಯನ್ನು ಆಯಾ ಶಾಲಾ ಮುಖ್ಯಸ್ಥರು ವ್ಯವಸ್ಥೆ ಮಾಡಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಚಿಸದವರು ಆನ್ ಲೈನ್ ತರಗತಿಗಳನ್ನು ಮುಂದುವರಿಸಬಹುದು. ಭೌತಿಕ ಹಾಜರಾತಿ ಕಡ್ಡಾಯವಲ್ಲ ಎಂದರು.
ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಈ ಬಗ್ಗೆ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ನಿಗಾವಹಿಸಬೇಕು. ಶಾಲೆಗಳಲ್ಲಿರುವ ಶೌಚಾಲಯಗಳನ್ನು ಪ್ರತಿ ದಿನ ಸ್ವಚ್ಚಗೊಳಿಸಲು ವ್ಯವಸ್ಥೆ ಮಾಡಬೇಕು. ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು, ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಒಟ್ಟಾರೆ ಕೋವಿಡ್ ನಿಯಂತ್ರಣ ಮುನ್ನೆಚ್ಚರಿಕೆ ಕ್ರಮಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಶಿಕ್ಷಕರು/ಸಹಾಯಕ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು. ಲಸಿಕೆ ಹಾಕಿಸಿಕೊಳ್ಳದ ಅಧಿಕಾರಿ/ಸಿಬ್ಬಂದಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವಂತೆ ಉಪನಿರ್ದೇಶಕರಿಗೆ ತಿಳಿಸಿದರು. ಇದೇ ಮಾದರಿಯಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣವನ್ನು ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಅಧಿಕಾರಿಯವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಿದರು.
ಶಾಲಾ ಕಾಲೇಜುಗಳನ್ನು ತೆರೆಯುವ ಮುನ್ನ ಕೊಠಡಿಗಳಿಗೆ ಕಡ್ಡಾಯವಾಗಿ ಸ್ಯಾನಿಟ್ಯಸ್ ಮಾಡಲು ವ್ಯವಸ್ಥೆ ಮಾಡಬೇಕು .ಶಾಲೆ ಆರಂಭವಾದ ನಂತರ ಯಾವುದಾದರೂ ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚಿನ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದಲ್ಲಿ ಅಂತಹ ಶಾಲೆಗಳನ್ನು 1ವಾರ ರಜೆ ಮಾಡಿ ಆ ಶಾಲಾ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಬೇಕು. ಆನಂತರವೇ ಅಂತಹ ಶಾಲೆಗಳನ್ನು ಪುನರಾರಂಭ ಮಾಡಬೇಕು ಎಂದರು. ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post