ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ನಾಯಿ ಕಡಿತಕ್ಕೊಳಗಾಗಿದ್ದ 5 ವರ್ಷದ ಬಾಲಕನಿಗೆ ಸೂಕ್ತ ಚುಚ್ಚುಮದ್ದು ನೀಡದ ಕಾರಣ ಮಗುವಿಗೆ ಜ್ವರ ಬಂದು ಸಾವನ್ನಪ್ಪಿದೆ ಎಂದು ಆರೋಪಿಸಿ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಬಾಲಕನ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಘಟನೆ ಹಿನ್ನೆಲೆ:
ಗೌರಿಬಿದನೂರು ತಾಲೂಕು ಕೋಟಾಲದಿನ್ನೆ ಗ್ರಾಮದ ಫೈರೋಜ್ ಹಾಗೂ ಫಾಮೀದಾ ದಂಪತಿಯ ಪುತ್ರ ಸಮೀರ್ (5) ಮೃತ ಬಾಲಕ ನಾಗಿದ್ದು, ಈತನಿಗೆ ಕಳೆದ ಆಕ್ಟೋಬರ್ 30 ರಂದು ನಾಯಿ ಕಡಿದಿತ್ತು. ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ನಾಯಿ ಕಡಿತಕ್ಕೆ ಇಂಜೆಕ್ಷನ್ ಕೊಡಿಸಲಾಗಿತ್ತಾದರೂ, 5 ದಿನಗಳ ನಂತರ ಮಗುವಿಗೆ ತೀವ್ರತರ ಜ್ವರ ಬಂದಿದೆ. ಚಿಕಿತ್ಸೆಗಾಗಿ ಬಾಲಕನನ್ನು ಗೌರಿಬಿದನೂರು ನಗರದ ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಿದ್ದಾರೆ. ತದನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.

Also read: ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಸಿಎಸ್‌ಆರ್ ಎಕ್ಸ್‌ಲೆನ್ಸ್ – 2022 ಪ್ರಶಸ್ತಿ











Discussion about this post