ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ Indian Army ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಬಾಲಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗಧಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:
- ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1ಕ್ಕೆ ರೂ.2.50ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1.00 ಲಕ್ಷಗಳು).
- ಕನಿಷ್ಠ ವಿದ್ಯಾರ್ಹತೆ:- ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.
- ವಯೋಮಿತಿ:- ಅಕ್ಟೋಬರ್ 01, 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು(ಅಭ್ಯರ್ಥಿಯು 01 Oct 2000 ರಿಂದ 01 Apr 2005{ 17 1/2 22)ರ ದಿನಾಂಕಗಳ ನಡುವೆ ಜನಿಸಿರಬೇಕು).
- ತರಬೇತಿ ನೀಡುವ ಸ್ಥಳಗಳು:- ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

Also read: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಫಿಲೀಯೇಶನ್ ರದ್ದು: ಹೋರಾಟಕ್ಕೆ ಸಂದ ಜಯ
ದಕ್ಷಿಣ ಕನ್ನಡ : 0824-2225078, ಉಡುಪಿ ಜಿಲ್ಲೆ : 0820-2574881, ಉತ್ತರ ಕನ್ನಡ ಜಿಲ್ಲೆ: 08382-226589, ಕೇಂದ್ರ ಕಛೇರಿ- 0850770004. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ವೆಬ್ ಸೈಟ್ ನಿಂದ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
	    	


 Loading ...
 Loading ... 
							



 
                
Discussion about this post