No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ, ಕಾಂಗ್ರೆಸ್‍ನವರ ಟೊಳ್ಳು ಬೆದರಿಕೆಗೆ ಅಂಜುವುದಿಲ್ಲ

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ

kalpa News by kalpa News
April 14, 2022
in ಚಿಕ್ಕ ಬಳ್ಳಾಪುರ, ರಾಜಕೀಯ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  |

ಗುತ್ತಿಗೆದಾರ ಸಂತೋಷ್ ಅವರ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್. ಈಶ್ವರಪ್ಪನವರ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್‍ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Minister Sudhakar ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆದಾರ ಮೃತರಾಗಿರುವುದಕ್ಕೆ ದುಃಖವಿದೆ. ಆದರೆ ಈ ಸಾವು ಏಕೆ ಸಂಭವಿಸಿದೆ ಎಂಬುದು ತನಿಖೆ ಆಗದೆಯೇ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಕೂಡ ಬೇಕಿಲ್ಲ. ಕಾಂಗ್ರೆಸ್‍ನವರು ಎಷ್ಟು ಸತ್ಯ ಹರಿಶ್ಚಂದ್ರರು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‍ನವರು ಯಾವ ಇಲಾಖೆಯಲ್ಲಿ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವ ಅಂಕಿ ಅಂಶಗಳನ್ನು ನಾವು ಕೂಡ ಕೊಡಬಹುದು ಎಂದರು.

ಓರ್ವ ವ್ಯಕ್ತಿ ಬರೆದ ಅನಾಮಧೇಯ ಪತ್ರ ಅಥವಾ ಆಧಾರ ರಹಿತ ದೂರಿಗೆ ಮಾನ್ಯತೆ ನೀಡಲು ಸಾಧ್ಯವಿಲ್ಲ. ದಾಖಲೆಗಳೇ ಇಲ್ಲದೆ ಒಬ್ಬರನ್ನು ಗೇಲಿ ಮಾಡುವುದು ಅಥವಾ ಆರೋಪ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಬಹಳ ಪಾರದರ್ಶಕವಾಗಿ ನಡೆದುಕೊಳ್ಳುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಿತಾಮಹರೇ ಕಾಂಗ್ರೆಸ್ಸಿಗರು. ಭ್ರಷ್ಟಾಚಾರದ ಜನಕರೇ ಕಾಂಗ್ರೆಸ್‍ನವರು ಎಂದರು.

Also read: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿಯವರು ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಸರ್ಕಾರವನ್ನು ನೀಡಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿ ಹೇಗೆ ಕೆಲಸ ಮಾಡಬೇಕೆಂದು ಅವರು ತೋರಿಸಿಕೊಟ್ಟಿದ್ದಾರೆ. ಭ್ರಷ್ಟಾಚಾರ ಇಲ್ಲ ಎಂದು ಕೂಡ ನಾನು ಹೇಳುತ್ತಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಭ್ರಷ್ಟಾಚಾರ ಹುಟ್ಟಿರುವುದಲ್ಲ. ಇದರ ನಿರ್ಮೂಲನೆಗೆ ಎಲ್ಲ ಪಕ್ಷಗಳು ಸೇರಿ ಚರ್ಚೆ ಮಾಡಬೇಕಿದೆ. ಭ್ರಷ್ಟಾಚಾರವನ್ನು ನಿಯಂತ್ರಿಸುವುದು ಹಾಗೂ ನಿರ್ಮೂಲನೆ ಮಾಡುವುದೇ ಈಗಿನ ಸವಾಲು ಎಂದರು.

ತನಿಖಾ ವರದಿ ಬರಲಿ:
ಕಾಂಗ್ರೆಸ್‍ನವರು ಏನು ಮಾಡುತ್ತಾರೆ ಎಂಬುದು ಈಗ ಮುಖ್ಯವಲ್ಲ. ತನಿಖೆ ನಂತರ ಸತ್ಯ ತಿಳಿದುಬರಲಿದೆ ಹಾಗೂ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಹಿಂದೆ ನಡೆದ ಡಿವೈಎಸ್‍ಪಿ ಗಣಪತಿ ಪ್ರಕರಣವೇ ಬೇರೆ, ಈಗಿನ ವಿಚಾರವೇ ಬೇರೆ. ವಾಟ್ಸಾಪ್ ನಲ್ಲಿ ಬಂದ ಸಂದೇಶ ಅವರಿಂದಲೇ ಬಂದಿದೆಯೇ ಎಂಬುದು ಯಾರಿಗೂ ಗೊತ್ತಿಲ್ಲ. ತನಿಖೆ ನಡೆಯುತ್ತಿರುವುದರಿಂದ ಕಾದು ನೋಡಬೇಕಿದೆ. ಸಾರ್ವಜನಿಕ ಬದುಕಿನಲ್ಲಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಇದರಲ್ಲಿ ಸಿಲುಕಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ತನಿಖಾ ವರದಿ ಬಂದ ಬಳಿಕ ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮಾನನಷ್ಟ ಮೊಕದ್ದಮೆ:
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದ್ದರಿಂದ ಅವರು ಪುರಾವೆ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡಬೇಕಾಗುತ್ತದೆ. ಆಧಾರ ರಹಿತವಾಗಿ ಅವರು ಆರೋಪ ಮಾಡಿದ್ದು, ಅವರ ವಿರುದ್ಧ ಕ್ರಮ ವಹಿಸಬೇಕು ಹಾಗೂ ಅವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ. ಜೊತೆಗೆ ಅವರ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಇಂತಹವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದ್ದು, ಅವರೆಲ್ಲರಿಗೂ ನಾಚಿಕೆಯಾಗಬೇಕು. ಎಲ್ಲ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಇದು ಕಾಂಗ್ರೆಸ್‍ನವರಿಗೂ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದರು.

ಸರ್ಕಾರ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ, ಗಂಭೀರವಾಗಿ ತನಿಖೆ ಮಾಡಲಿದೆ. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಆದರೆ ಯಾರೋ ಆರೋಪ ಮಾಡುವುದನ್ನು ಪರಿಗಣಿಸಲಾಗುವುದಿಲ್ಲ. ಈ ರೀತಿ ಮಾಡಿದರೆ ಇದೇ ಪರಂಪರೆ ಹೆಚ್ಚುತ್ತದೆ. ಬಡ ಜನರನ್ನು ಎತ್ತಿ ಕಟ್ಟಿ ಸಚಿವರ ವಿರುದ್ಧ ಮಾತನಾಡಲು ಕುಮ್ಮಕ್ಕು ನೀಡಲಾಗುತ್ತಿದೆ. ಆಮಿಷ ತೋರಿಸಿ ಅಮಾಯಕರ ಜೀವ ಕಳೆದರೆ ವಿಪಕ್ಷದ ವಿರುದ್ಧವೂ ತನಿಖೆ ಮಾಡಬೇಕಾಗುತ್ತದೆ ಎಂದರು.

ತನಿಖೆಗೆ ಸಿಎಂಗೆ ಮನವಿ:
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿ ಸಚಿವರು ಮಾಡಿದ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡಿಸಬೇಕಿದೆ. ಚಾರ್ಜ್ ಶೀಟ್ ಕೂಡ ದಾಖಲಿಸಬೇಕಿದೆ. ಈ ಘಟನೆಯಿಂದ ರಾಜ್ಯ ಹಾಗೂ ಸರ್ಕಾರದ ಗೌರವ ಹಾಳಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋರಲಾಗುವುದು ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಚುನಾವಣೆ ಸಮಯದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸನ್ನು ಕಾಂಗ್ರೆಸ್ ಕಾಣುತ್ತಿದೆ. ಈ ರೀತಿ ಆರೋಪಗಳನ್ನು ಮಾಡಿದರೆ ಕಾನೂನು ಹೋರಾಟ ನಡೆಸಲಾಗುವುದು. ಗುತ್ತಿಗೆದಾರರು ಆಧಾರ ರಹಿತವಾಗಿಯೇ ಎಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇವರೆಲ್ಲರೂ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkaballapuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaPolitical Newsಚಿಕ್ಕಬಳ್ಳಾಪುರಸಚಿವ ಡಾ. ಕೆ ಸುಧಾಕರ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

Next Post

ಬಾಲಕಾರ್ಮಿಕರ ಪತ್ತೆಗೆ ನಿರಂತರ ತಪಾಸಣೆ ಅಗತ್ಯ : ಡಿಸಿ ಡಾ. ಸೆಲ್ವಮಣಿ

kalpa News

kalpa News

Next Post
ಬಾಲಕಾರ್ಮಿಕರ ಪತ್ತೆಗೆ ನಿರಂತರ ತಪಾಸಣೆ ಅಗತ್ಯ : ಡಿಸಿ ಡಾ. ಸೆಲ್ವಮಣಿ

ಬಾಲಕಾರ್ಮಿಕರ ಪತ್ತೆಗೆ ನಿರಂತರ ತಪಾಸಣೆ ಅಗತ್ಯ : ಡಿಸಿ ಡಾ. ಸೆಲ್ವಮಣಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL