ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ನಗರದ ಎಸ್.ಜೆ.ಸಿ.ಐ.ಟಿ ಕಾಲೇಜು ಆವರಣದಲ್ಲಿ ಶ್ರಮಿಕ್ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್ ಸೇವೆಯ ವಾಹನಕ್ಕೆ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Minister Sudhakar ಹಾಗೂ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿ ಅವರು ಚಾಲನೆ ನೀಡಿದರು.
ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರ ಆರೋಗ್ಯ ಸೇವೆ ನೀಡುವ ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಈ ವಾಹನವು ಪ್ರತಿ ದಿನ ಒಂದು ತಾಲ್ಲೂಕಿಗೆ ಸಂಚರಿಸಿ ಕಾರ್ಮಿಕರಿಗೆ ಆರೋಗ್ಯ ಸೇವೆ ನೀಡಲಿದೆ. ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಒಂದು ಸ್ಥಳ ನಂತರ ಮಧ್ಯಾಹ್ನ 2.30 ರಿಂದ ಸಂಜೆಯವರೆಗೆ ಒಂದು ಸ್ಥಳದಲ್ಲಿ ಅರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಸೇವೆ ಒದಗಿಸುತ್ತದೆ.

Also read: ಕೊರಟಗೆರೆ: 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನ, ಹೈಅಲರ್ಟ್ ಘೋಷಣೆ!
ವಾಹನದಲ್ಲಿ ಏನೇನಿದೆ?
ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಆಧುನಿಕ ಸ್ಟ್ರೆಚ್ಚರ್, ಬೆಡ್, ಆಕ್ಸಿಜನ್ ಪರಿಕರಗಳು, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳನ್ನು ಹೊಂದಿದೆ. ಓರ್ವ ವೈದ್ಯ, ನರ್ಸ್, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಚಾಲಕ ಮತ್ತು ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಾಥಮಿಕ ಆರೋಗ್ಯ ಸೇವಾ ಕೇಂದ್ರದ ವ್ಯಾಪ್ತಿಯಲ್ಲಿರುವಂತಹ ಎಲ್ಲ ಆರೋಗ್ಯ ಸೇವೆಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಮೂಲಕ ದೊರಕಲಿದೆ ಎಂದರು.

ಜಿಲ್ಲೆಯಲ್ಲಿರುವ ನೋಂದಾಯಿತ ಮತ್ತು ಅಸಂಘಟಿತ ಕಾರ್ಮಿಕರ ಮಾಹಿತಿ ಪಡೆದು, ಕಾರ್ಮಿಕ ಸಂಘಟನೆಗಳ ಮುಖಂಡರ ನೆರವಿನಿಂದ ಆಯಾ ಪ್ರದೇಶಗಳಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅಗತ್ಯ ಮಾತ್ರೆ, ಔಷಧಿಗಳನ್ನೂ ಉಚಿತವಾಗಿ ನೀಡಲಾಗುತ್ತದೆ. ಕಟ್ಟಡ ಕಾರ್ಮಿಕರು ನೋಂದಾಯಿತ ಕಾರ್ಡ್, ಅಸಂಘಟಿತ ಕಾರ್ಮಿಕರು ಈ ಶ್ರಮ ಕಾರ್ಡ್ ತೋರಿಸುವ ಮೂಲಕ ಸೇವೆ ಪಡೆಯಬಹುದು. ಕಾರ್ಮಿಕರ ಅವಲಂಬಿತರು ಪಡಿತರ ಚೀಟಿ, ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದು ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರು ಮಾಹಿತಿ ನೀಡಿದರು.










Discussion about this post