ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಕಂಟೈನರ್ ಸಾಗಿಸುವ ಲಾರಿ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನಾಗಪ್ಪ ವೃತ್ತದಲ್ಲಿ ಘಟನೆ ಸಂಭವಿಸಿದೆ.
ಗಾಯಾಳು ವಿದ್ಯಾರ್ಥಿಗಳೆಲ್ಲರೂ ಗೌರಿಬಿದನೂರಿನ ಮುನ್ಸಿಪಲ್ ಕಾಲೇಜಿನಲ್ಲಿ ಓದುತ್ತಿರುವವರು. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
Also read: ಪಾಲಿಕೆ ಸದಸ್ಯರ ಅನುದಾನದಲ್ಲಿ ಹೈಮಾಸ್ಕ್ ದೀಪ ಅಳವಡಿಕೆ: ರೇಖಾ ರಂನಾಥ್ ಚಾಲನೆ
ಅಪಫಾತದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿಕ್ಕಬಳ್ಳಾಪುರ ಜಿ¯್ಲೆಯ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post