ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ (54) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿದ್ದು, ಈ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಿಕೆಟ್’ಗೆ ಅರ್ಜಿ ಸಲ್ಲಿಸಿದ್ದ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.
Also read: ಸಾಗರ: ಹಾಲಪ್ಪ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಗೆ ಹರಿದುಬಂತು ಜನಸಾಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post