ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಅತಿ ಶೀಘ್ರದಲ್ಲೇ ಕನ್ನಡ ಸೇರಿ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾಗಿದ್ದು, ಇಂತಹ ಜನ್ಮಭೂಮಿಗೆ ಬಂದಿದ್ದು ನನ್ನ ಪುಣ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು. ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ ಎಂದರು.










Discussion about this post