No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ದೇಶ ಸಮರ್ಥವಾಗಿ ಮುನ್ನಡೆಯಲು ವಿದ್ಯುತ್ ಪಾತ್ರ ಮಹತ್ವದ್ದು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

kalpa News by kalpa News
July 30, 2022
in ಚಿಕ್ಕ ಬಳ್ಳಾಪುರ
0
ದೇಶ ಸಮರ್ಥವಾಗಿ ಮುನ್ನಡೆಯಲು ವಿದ್ಯುತ್ ಪಾತ್ರ ಮಹತ್ವದ್ದು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  |           

ದೇಶ ಸಮರ್ಥವಾಗಿ ಪ್ರಗತಿಯತ್ತ  ಮುನ್ನಡೆಯಲು ವಿದ್ಯುತ್ ಪಾತ್ರವೂ ಮಹತ್ವದ್ದಾಗಿದ್ದು, ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 10,1,722 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ 1.5 ಲಕ್ಷ ಮೆಗಾವ್ಯಾಟ್ ವಿದ್ಯುತ್ ಅನ್ನು ಉತ್ಪಾದನೆ ಮಾಡಿ  ದೇಶದ  ಪ್ರತಿ  ಗ್ರಾಮಗಳಿಗೆ  ವಿದ್ಯುತ್  ಸಂಪರ್ಕ ನೀಡಲು ಕಾರಣವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Minister Sudhakar ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಇಂಧನ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಬಳ್ಳಾಪುರ   ತಾಲೂಕಿನ  ಅಂದಾರ್ಲಹಳ್ಳಿ ಗ್ರಾಮ ಹಾಗೂ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ “ಉಜ್ವಲ ಭಾರತ, ಉಜ್ವಲ ಭವಿಷ್ಯ” ಘೋಷವಾಕ್ಯದಡಿ ಹಮ್ಮಿಕೊಂಡಿದ್ದ ವಿದ್ಯುತ್ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ  68 ವರ್ಷಗಳಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಸಾಧಿಸಲಾಗದ್ದನ್ನು ಪ್ರಸ್ತುತ ಕೇಂದ್ರ ಸರ್ಕಾರ ಕೇವಲ 7 ವರ್ಷಗಳಲ್ಲಿ ಸಾಧಿಸಿ ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. 68 ವರ್ಷಗಳಲ್ಲಿ 2.5 ಲಕ್ಷ ಮೆಗಾವ್ಯಾಟ್ ವಿದ್ಯುತ್ ಅನ್ನು ದೇಶ ಉತ್ಪಾದಿಸುವ  ಸಾಮರ್ಥ್ಯವನ್ನು ಹೊಂದಿತ್ತು. ಪ್ರಸ್ತುತ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ ಕೇವಲ 7 ವರ್ಷಗಳ ಅವಧಿಯಲ್ಲಿ 1.5 ಲಕ್ಷ ಮೆಗಾವ್ಯಾಟ್ ಅಧಿಕ ವಿದ್ಯುತ್ ಅನ್ನು ಉತ್ಪಾದಿಸಿ ಸ್ವಾವಲಂಬನೆ ಸಾಧಿಸುವ ಜೊತೆಗೆ  ವಿದೇಶಗಳಿಗೂ ವಿದ್ಯುತ್ ರಫ್ತು ಮಾಡುತ್ತಿದೆ. ಪ್ರಸ್ತುತ ದೇಶದಲ್ಲಿ 4 ಲಕ್ಷ ಮೆಗಾವ್ಯಾಟ್ ಗೂ  ಹೆಚ್ಚಿನ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದರು.

ದೇಶದ ಈಶಾನ್ಯ ರಾಜ್ಯಗಳ ಬುಡಕಟ್ಟು ಸಮುದಾಯಗಳ ವಸತಿ ಪ್ರದೇಶಗಳೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿದ್ದ ಪ್ರದೇಶಗಳಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ದೂರದೃಷ್ಟಿ ಮತ್ತು ಸಮರ್ಥ ನಾಯಕತ್ವಕ್ಕೆ ಹಿಡಿದ  ಕೈಗನ್ನಡಿಯಾಗಿದೆ ಎಂದು ಹೇಳಿದರು.
ಸದ್ಯ ದೇಶದಲ್ಲಿ ಅಗತ್ಯವಿರುವುದು ಕೇವಲ 2.20 ಲಕ್ಷ ಮೆಗಾವ್ಯಾಟ್ ವಿದ್ಯುತ್ ಆಗಿದ್ದು, ಉಳಿದ ಸುಮಾರು 1.85 ಲಕ್ಷ ಮೆಗಾವ್ಯಾಟ್ ನಷ್ಟು ವಿದ್ಯುತ್  ವಿದೇಶಗಳಿಗೆ ರಫ್ತಾಗುತ್ತಿದೆ. ಇದು ಪ್ರಧಾನಿಯವರ ಆತ್ಮನಿರ್ಭರ ಮತ್ತು ಸಮೃದ್ಧಿಯ ಹಾಗೂ ನವಭಾರತ  ನಿರ್ಮಾಣದ ಪರಿಕಲ್ಪನೆಗೆ ಪೂರಕವಾಗಿದೆ ಎಂದರು.

ದೇಶದಲ್ಲಿ ಸಾಂಪ್ರದಾಯಿಕ ವಿದ್ಯುತ್ ಉತ್ಪಾದನೆಯ ಜೊತೆಗೆ ನವೀಕರಿಸಬಹುದಾದ ಪರಿಸರಸ್ನೇಹಿ  ಇಂಧನ ಉತ್ಪಾದನೆಗೂ ಸರ್ಕಾರ ಕ್ರಮ ಕೈಗೊಂಡಿದ್ದು. ಪ್ರಸ್ತುತ ಈ ರೀತಿಯ ಇಂಧನ ಶೇ.30 ರಿಂದ 40 ರಷ್ಟು ಉತ್ಪಾದನೆಯಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇಂಧನ ಇಲಾಖೆ ರೂಪಿಸಿದ ನೂತನ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮನೆಗಳಲ್ಲಿ 75 ಯೂನಿಟ್ ವಿದ್ಯುತ್ ಬಳಸುವಷ್ಟು ಹಣವನ್ನು ಉಚಿತವಾಗಿ ಪ್ರತಿ ತಿಂಗಳು ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಇದರ ಸದುಪಯೋಗವನ್ನು  ಅರ್ಹರು ಪಡೆದುಕೊಳ್ಳಬೇಕು. 75 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಉಪಯೋಗಿಸಿದಲ್ಲಿ ಹಣ ಪಾವತಿಸಬೇಕು. ಈ ನಿಟ್ಟಿನಲ್ಲಿ ವಿದ್ಯುತ್ ನ್ನು ಅಗತ್ಯಕ್ಕೆ ತಕ್ಕಂತೆ ಉಪಯೋಗಿಸಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
2023 ಕ್ಕೆ ಎತ್ತಿನ ಹೊಳೆ ನೀರು ಜಿಲ್ಲೆಗೆ

ಮುಖ್ಯಮಂತ್ರಿಗಳು ಈ ಬಾರಿ ಆಯವ್ಯಯದಲ್ಲಿ ಎತ್ತಿನ ಹೊಳೆ ಯೋಜನೆಗೆ ಸುಮಾರು 3 ಸಾವಿರ ಕೋಟಿ ಅನುದಾನವನ್ನು ಘೋಷಿಸಿದ್ದರು. ಅದಕ್ಕೆ ಅಧಿಕವಾಗಿ ಒಂದು ಸಾವಿರ ಕೋಟಿ ರೂಗಳನ್ನು ನೀಡಲಾಗುತ್ತಿದ್ದು, ಒಟ್ಟಾರೆ 4 ಸಾವಿರ ಕೋಟಿ ರೂ ಎತ್ತಿನ ಹೊಳೆ ಯೋಜನೆ ಕಾಮಗಾರಿಗಳು ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಮುಂದುವರೆಯಲಿವೆ. 2023 ಡಿಸೆಂಬರ್ ಅಂತ್ಯಕ್ಕೆ ಎತ್ತಿನ ಹೊಳೆ ನೀರು ಜಿಲ್ಲೆಗೆ ತಲುಪಲಿದೆ ಎಂದರು.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ  ಎಚ್.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ಹಾಗೂ ವೃಷಭ ವ್ಯಾಲಿ ಯೋಜನೆಗಳು ಚಾಲ್ತಿಯಲ್ಲಿವೆ  ಎಂದು ಹೇಳಿದರು.

Also read: ರಾಸಾಯನಿಕ ದುರಂತ ತಡೆಗಟ್ಟಲು ಅಣುಕು ಪ್ರದರ್ಶನ ಕಾರ್ಯಾಚರಣೆ ಯಶಸ್ವಿ: ತಹಶೀಲ್ದಾರ್ ರಾಜೀವ್

ಜಿಲ್ಲೆಯ 7,321 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ: ಪೌರಾಡಳಿತ ಸಚಿವ ಎನ್. ನಾಗರಾಜ್

ಜಿಲ್ಲಾ  ಉಸ್ತುವಾರಿ  ಸಚಿವ  ಎನ್. ನಾಗರಾಜ್  ಅವರು ಕಾರ್ಯಕ್ರಮ  ಉದ್ಘಾಟನೆ  ಮಾಡಿ  ಮಾತನಾಡುತ್ತಾ,   ದೀನದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಸುಮಾರು 14.61 ಕೋಟಿ ರೂ ವೆಚ್ಚದಲ್ಲಿ ಜಿಲ್ಲೆಯ 771 ಗ್ರಾಮಗಳ 7,321 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಈಗಾಗಲೇ 109 ಗ್ರಾಮಗಳಲ್ಲಿ 1,146 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು  ಕಲ್ಪಿಸಲಾಗಿದೆ ಎಂದು ಹೇಳಿದರು.

ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆ (ಐ.ಪಿ.ಡಿ.ಎಸ್)ಯಡಿ ಸುಮಾರು 11.5 ಕೋಟಿ ರೂ ಅನುದಾನದಲ್ಲಿ 27.66 ಕಿಲೋ ಮೀಟರ್ ಮಾರ್ಗಗಳನ್ನು, 23.61 ಕಿಲೋ ಎಲ್.ಟಿ ಮಾರ್ಗಗಳು ನಿರ್ಮಿಸಲಾಗಿದೆ ಎಂದರು.
ಬೆಳಕು ಯೋಜನೆಯಡಿ 4.50 ಕೋಟಿ ರೂ ವೆಚ್ಚದಲ್ಲಿ ಜಿಲ್ಲೆಯಲ್ಲಿರುವ 6,269 ಬಿ.ಪಿ.ಎಲ್. ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಹಾಗೂ ಅಧ್ಯಕ್ಷರಾದ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ.ಎಸ್.ಜಯಚಂದ್ರ,  ಬೀಚಗಾನ ಹಳ್ಳಿ  ಗ್ರಾಮ  ಪಂಚಾಯತ್  ಅಧ್ಯಕ್ಷ ವೆಂಕಟ ನರಸಪ್ಪ,  ಪವರ್ ಗ್ರೀಡ್ ಪ್ರಧಾನ ವ್ಯವಸ್ಥಾಪಕರಾದ ಪಿ.ಶ್ರೀನಿವಾಸ್, ಚಿಕ್ಕಬಳ್ಳಾಪುರ ವಿಭಾಗದ ಪಿ.ಎಲ್.ಡಿ ಬ್ಯಾಂಕಿನ ನಿರ್ದೇಶಕರಾದ ಆನಂದಮೂರ್ತಿ, ಕೋಲಾರ ವೃತ್ತದ ಅಧೀಕ್ಷಕ ಇಂಜಿನಿಯರ್ ಎ.ಆರ್.ಮೃತ್ಯುಂಜಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಈ ವೇಳೆ  ಎರಡು  ಗ್ರಾಮಗಳಲ್ಲಿ ವಿದ್ಯುತ್ ಮಿತ ಬಳಕೆ, ವಿದ್ಯುತ್  ಉತ್ಪಾದನೆಯಲ್ಲಿ  ಸಾಧಿಸಿದ  ಯಶಗಾಥೆ ಹಾಗೂ ಸರ್ಕಾರಿ ಯೋಜನೆಗಳು  ಸೇರಿದಂತೆ  7  ವಿಷಯಗಳ  ಕುರಿತು ಸಾಕ್ಷ್ಯಚಿತ್ರ, ಕಿರು ಚಿತ್ರ ಪ್ರದರ್ಶನ   ಮತ್ತು  ಜಾಗೃತಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.  ಜಾಗೃತಿ  ನಾಟಕಗಳನ್ನು  ವಿವೇಕಾನಂದ ಕಲಾತಂಡದವರು ನಡೆಸಿಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkaballapuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಚಿಕ್ಕಬಳ್ಳಾಪುರಸಚಿವ ಡಾ. ಕೆ ಸುಧಾಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಸಾಯನಿಕ ದುರಂತ ತಡೆಗಟ್ಟಲು ಅಣುಕು ಪ್ರದರ್ಶನ ಕಾರ್ಯಾಚರಣೆ ಯಶಸ್ವಿ: ತಹಶೀಲ್ದಾರ್ ರಾಜೀವ್

Next Post

Defence Minister approves enhancement of financial aid to orphaned

kalpa News

kalpa News

Next Post
ಶೀಘ್ರ ಮೂರನೆಯ ಸರ್ಜಿಕಲ್ ಸ್ಟ್ರೈಕ್? ರಾಜನಾಥ್ ಸಿಂಗ್ ಮಾತಿನ ಗುಟ್ಟೇನು?

Defence Minister approves enhancement of financial aid to orphaned

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL