ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಯಾವುದೇ ಕೊರತೆಯಾಗುವುದಿಲ್ಲ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಕೊರತೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಇದೆ. ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಾಗರಿಕರು ಕೂಡ ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಬೇಕು ಎಂಬುದನ್ನು ಅರಿಯಬೇಕು. ಅನಗತ್ಯವಾಗಿ ಗುಂಪುಗೂಡುವುದು, ಮಾಸ್ಕ್ ಧರಿಸದಿರುವುದು ಮೊದಲಾದ ಕ್ರಮಗಳಿಗೆ ಈಗಾಗಲೇ ಕಡಿವಾಣ ಹಾಕಲಾಗಿದೆ. ಸಭೆ, ಸಮಾರಂಭಗಳನ್ನು 2 ತಿಂಗಳ ಮಟ್ಟಿಗೆ ಮುಂದೂಡಬೇಕು ಎಂದು ಕೋರಿದರು.
ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಬೇಕು ಎಂದು ಸಚಿವರು ಟ್ವೀಟ್ ನಲ್ಲಿ ಕೋರಿದ್ದಾರೆ.
ಕಾನೂನು ಕ್ರಮ ಜಾರಿಯಾಗಲಿದೆ
ಅಮಾಯಕ ದಲಿತ ಯುವಕ ಸ್ವಂತ ದುಡಿಮೆಯಿಂದ ಆತ್ಮಗೌರವದಿಂದ ಸ್ವಾಭಿಮಾನದ ಬದುಕನ್ನು ಬದುಕುತ್ತಿದ್ದರು. ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿದ್ದ ಅವರನ್ನು ಹಿಂದಿನ ಯಾವುದೋ ವೈಷಮ್ಯದಿಂದ ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಅಂತಹ ಪಾಪಿಗಳ ವಿರುದ್ಧ ಕಾನೂನು ಕ್ರಮ ಜಾರಿಯಾಗಲಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಇದರ ಹಿಂದೆ ಇರುವವವರ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಹೇಳಲಾಗಿದೆ. ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಕೂಡ ಬಿಡುವ ಪ್ರಶ್ನೆಯೇ ಇಲ್ಲ. 56 ವರ್ಷಗಳ ನಂತರ ನನ್ನ ಕ್ಷೇತ್ರದಲ್ಲಿ ಅಪರಾಧ ನಡೆದಿದೆ. ತಪ್ಪಿತಸ್ಥರಿಗೆ ಉಗ್ರವಾದ ಶಿಕ್ಷೆಯಾಗಲಿದೆ. ಈ ಘಟನೆಯಿಂದ ಬಹಳ ದುಃಖವಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post