ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯತೀಂದ್ರ Yanthindra ಅವರು ಮೈಸೂರಿನಿಂದ ಗೆಲುವು ಸಾಧಿಸುತ್ತಾರೆ ಎಂದು ಹೇಳುವ ಮೂಲಕ ಹೊಸ ಚರ್ಚೆಯೊಂದಕ್ಕೆ ಶಾಸಕ ಪ್ರದೀಪ್ ಈಶ್ವರ್ MLA Pradeep Eshwar ಹಾದಿ ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈ ಮಧ್ಯೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಪ್ರದೀಪ್ ಈಶ್ವರ್ ಅವರು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಟೀಕಿಸುವ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಮೂಲಕ ಹೊಸ ಚರ್ಚೆಗೆ ಹಾದಿ ಹಾಕಿಕೊಟ್ಟಿದ್ದಾರೆ.
ಸಂಸದ ಪ್ರತಾಪ್ ಸಿಂಹನಂತಹ MP Prathap Simha ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್, ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.
Also read: ಎಲ್ಲ ಗ್ಯಾರೆಂಟಿಗಳು ಜನರಿಗೆ ತಲುಪುತ್ತಿವೆ, ಬೇಕಾದರೆ ಪರಿಶೀಲಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ
ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ನೀವು ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post