ಕಲ್ಪ ಮೀಡಿಯಾ ಹೌಸ್
ಚಿಕ್ಕಮಗಳೂರು: ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಮೇ 24ರಿಂದ 28ರವರೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶಿಸಿದ್ದಾರೆ.
ಕಠಿಣ ನಿಯಮಾವಳಿಯೊಂದಿಗೆ ಹಿಂದೆ ಇದ್ದ ಮಾರ್ಗಸೂಚಿಗಳಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ಹೋಟೆಲ್, ದಿನಸಿ ಅಂಗಡಿಗೆ ಹಾಗೂ ಹೋಂ ಡೆಲಿವರಿಗೆ ಅವಕಾಶವಿದ್ದು, ತಳ್ಳುವ ಗಾಡಿಯಲ್ಲಿ ಹಣ್ಣು-ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅನುಮತಿ ಇದೆ.
ಈ ಹಿಂದೆ ವಿಧಿಸಿದ್ದ ನಾಲ್ಕು ದಿನ ಲಾಕ್ ಡೌನ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನ ಲಾಕ್ ಡೌನ್ ಮುಂದುವರೆಸುವುದರಿಂದ ಸೋಂಕು ಹರಡುವುದು ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post